ಬಿಸಿ ಬಿಸಿ ಸುದ್ದಿ

9 ರಂದು ನೆಹರು ಯುವ ಕೇಂದ್ರದಿಂದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಗೆ ಅರ್ಜಿ ಆಹ್ವಾನ

ಕಲಬುರಗಿ; ಭಾರತ ಸರ್ಕಾರದ ನೆಹರು ಯುವ ಕೇಂದ್ರದ ವತಿಯಿಂದ “MYBharat-Viksit Bharat@2047” ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಇದೇ ಜನವರಿ 9 ರಂದು ಕಲಬುರಗಿ ಶರಣಬಸವೇಶ್ವರ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಕಲಬುರಗಿ ಜಿಲ್ಲೆಯ ನಿವಾಸಿಯಾಗಿರಬೇಕು. ವಯೋಮಿತಿ 15 ರಿಂದ 29 (12ನೇ ಜನವರಿ 2024ಕ್ಕೆ) ವರ್ಷದೊಳಗಿರಬೇಕು. ಭಾಷಣವನ್ನು ಕನ್ನಡ, ಹಿಂದಿ ಮತ್ತು ಇಂಗ್ಲೀಷ ಭಾಷೆಯಲ್ಲಿ ಮಾತನಾಡಬೇಕು. ಭಾಷಣದ ಕಾಲಾವಕಾಶ 7 ನಿಮಿಷ ಮಾತ್ರ ಇರುತ್ತದೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಮಾತ್ರ ರಾಜ್ಯ ಮಟ್ಟಕ್ಕೆ ಕಳುಹಿಸಲಾಗುತ್ತದೆ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 1 ಲಕ್ಷ ರೂ. ಬಹುಮಾನ, ದ್ವಿತೀಯ ಸ್ಥಾನ ಪಡೆದವರಿಗೆ 50 ಸಾವಿರ ರೂ. ಬಹುಮಾನ, ತೃತೀಯ ಸ್ಥಾನ ಪಡೆದವರಿಗೆ 25 ಸಾವಿರ ರೂ. ಗಳ ಬಹುಮಾನ ಇರುತ್ತದೆ.

ಈ ಜಿಲ್ಲಾ ಮಟ್ಟದಲ್ಲಿ ಭಾಗವಹಿಸುಲು ಇಚ್ಛೆಯುಳ್ಳವರು 2024ರ ಜನವರಿ 9 ರಂದು ಅಥವಾ ಇದಕ್ಕಿಂತ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿಗಾಗಿ ಕಲಬುರಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳ ಮೊಬೈಲ್ ಸಂಖ್ಯೆ 8105534419 ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

3 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

3 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

3 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

3 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

3 hours ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

4 hours ago