ಬಿಸಿ ಬಿಸಿ ಸುದ್ದಿ

ನಾಳೆ ಸ್ಪೂರ್ತಿ ಮಾತುಗಳು ಸ್ಪೂರ್ತಿ ಕಿರಣಗಳು ಮುಕ್ತ ಸಂವಾದ

ಕಲಬುರಗಿ: ಜಿಲ್ಲೆಯ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗಾಗಿ “ಸ್ಪೂರ್ತಿಯ ಮಾತುಗಳು ಕೀರ್ತಿಯ ಕಿರಣಗಳು” ಎಂಬ ಮುಕ್ತ ಸಂವಾದ ಕಾರ್ಯಕ್ರಮ ಇದೇ ಜ. 08ರಂದು ಬೆಳಗ್ಗೆ 10:30 ರಿಂದ 11:30 ರವರೆಗೆ ಜಿಲ್ಲಾಡಳಿತ,ಜಿಲ್ಲಾಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಯೂಟ್ಯೂಬ್ ಮೂಲಕ ನೇರ ಪ್ರಸಾರ ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಕ್ರೆಪ್ಪಗೌಡ ಬಿರದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತಂತೆ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಂವರ ಸಿಂಗ್ ಮೀನಾ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್. ಜಿಲ್ಲೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದವನ್ನು ನಡೆಸಲಿದ್ದಾರೆ. ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಕೆಲವು ಮಕ್ಕಳು ಸಿಟಿಇ ಕಲಬುರಗಿ ಸ್ಟುಡಿಯೋದಲ್ಲಿ ನೇರವಾಗಿ ಅಧಿಕಾರಿಗಳೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳು ನೇರ ಪ್ರಸಾರವನ್ನು ವೀಕ್ಷಿಸುವುದರ ಜತೆಗೆ ಶಾಲೆಯ ಎಲ್ಲಾ ಶಿಕ್ಷಕರು, ಮುಖ್ಯಗುರುಗಳು, ಪಾಲಕರು ಭಾಗವಹಿಸಬೇಕು ಎಂದು ಸೂಚಿಸಿದ್ದಾರೆ.

ಪ್ರೌಢ ಶಾಲೆಯ ಮುಖ್ಯಗುರುಗಳು ತಮ್ಮ ಶಾಲೆಯಲ್ಲಿ ಲ್ಯಾಪ್‌ ಟಾಪ್/ಕಂಪ್ಯೂಟರ್‌ಗಳಿಗೆ ಇಂಟರ್‌ನೆಟ್ ಅಳವಡಿಸಿಕೊಂಡು ಎಲ್.ಇ.ಡಿ. ಪರದೆ / ಪ್ರೊಜೆಕ್ಟರ್ ನೊಂದಿಗೆ ಮುಕ್ತ ಸಂವಾದ ಕಾರ್ಯಕ್ರಮಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಳ್ಳಲು ತಿಳಿಸುತ್ತಾ ಸರಿಯಾದ ಸಮಯಕ್ಕೆ ತಮ್ಮ ಶಾಲೆಯ ಎಸ್.ಎಸ್.ಎಲ್.ಸಿ. ಮಕ್ಕಳೊಂದಿಗೆ ಕಡ್ಡಾಯವಾಗಿ ತಮಗೆ ನೀಡಿರುವ ಯೂಟ್ಯೂಬ್ ಲಿಂಕ್ batia Co: https://youtube.com/live/4LrYeJr-LIY ಮೂಲಕ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಕೋರಿದ್ದಾರೆ.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

5 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

5 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

5 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

5 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

5 hours ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

5 hours ago