ಸುರಪುರ: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲಿ ಇಲ್ಲದಂತ ಭೀಕರ ಬರಗಾಲ ಬಿದ್ದಿದೆ,ಇದರಿಂದ ಜನರು ಕೂಲಿಕಾರರು ತತ್ತಿರಿಸಿ ಹೋಗಿದ್ದಾರೆ,ಆದರೆ ಸರಕಾರಗಳು ಮಾತ್ರ ಸರಿಯಾದ ಪರಿಹಾರವನ್ನು ನೀಡದೆ ರೈತರನ್ನು ಕಾರ್ಮಿಕರನ್ನು ನಿರ್ಲಕ್ಷಿಸುತ್ತಿವೆ ಇದರಿಂದ ಜನರು ಪರದಾಡು ಸ್ಥಿತಿ ನಿರ್ಮಾಣವಾಗಿದೆ.
ಆದ್ದರಿಂದ ಕೂಡಲೇ ಸರಕಾರ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ನೂರು ದಿನಗಳ ಬದಲು ಎರಡು ನೂರು ದಿನಗಳಿಗೆ ಹೆಚ್ಚಿಸಬೇಕು,ದಿನಕ್ಕೆ 600 ರೂಪಾಯಿ ಕೂಲಿ ನೀಡಬೇಕು,ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು,ಎಲ್ಲ ರೈತರ ಬ್ಯಾಂಕ್‍ಗಳಲ್ಲಿನ ಸಾಲ ಮನ್ನಾ ಮಾಡಬೇಕು,ವಲಸೆ ಕಾರ್ಮಿಕರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು,ಉದ್ಯೋಗಿ ಖಾತ್ರಿ ಕೆಲಸಕ್ಕೆ ಯಂತ್ರಗಳ ಬಳಕೆ ಬದಲಾಗಿ ಕೂಲಿಕಾರರಿಗೆ ಕೆಲಸ ನೀಡಬೇಕು ಎನ್ನುವುದು ಸೇರಿದಂತೆ ಇನ್ನೂ ಅನೇಕ ಸ್ಥಳಿಯ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಕೆ.ವಿಜಯಕುಮಾರ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಶರಣಬಸವ ಜಂಬಲದಿನ್ನಿ,ಪ್ರಧಾನ ಕಾರ್ಯದರ್ಶಿ ಪ್ರಕಾಶ ಆಲ್ಹಾಳ,ಉಪಾಧ್ಯಕ್ಷರಾದ ಶಾಂತಮ್ಮ ಶೆಳ್ಳಗಿ,ಬಸವರಾಜ ಶಾಂತಪುರ,ಖಾಜಾಸಾಹೇಬ ನಾಗರಾಳ,ವಿರೇಶ ಕವಡಿಮಟ್ಟಿ,ಬಸವರಾಜ ಮುಷ್ಠಳ್ಳಿ, ಮದೀನಾ ತಳ್ಳಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…