ಡಾ. ಮಲ್ಲಿಕಾರ್ಜುನ ಖರ್ಗೇ ಸಮ್ಮುಖದಲ್ಲಿ ಕಸಾಪದಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

0
645

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹೊರತಂದಿರುವ 2024 ನೇ ಸಾಲಿನ ಸಂಪೂರ್ಣ ಕನ್ನಡದ ಅಂಕಿಗಳನ್ನು ಹೊಂದಿದ ಆಕರ್ಷಣೀಯವಾದ ದಿನದರ್ಶಿಕೆಯನ್ನು ರಾಜ್ಯಸಭೆಯ ವಿಪಕ್ಷ ನಾಯಕರೂ ಆದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೇ ಅವರ ಸಮ್ಮುಖದಲ್ಲಿ ಮಂಗಳವಾರ ನಗರದ ಬುದ್ಧವಿಹಾರದಲ್ಲಿ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ವರ್ತಮಾನದ ಪೀಳಿಗೆಯನ್ನು ಜೋಡಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಹೋಬಳಿ ಘಟಕಗಳ ಮೂಲಕ ಗ್ರಾಮೀಣ ಭಾಗಕ್ಕೆ ಸಾಹಿತ್ಯ ಪರಿಷತ್ತನ್ನು ಕೊಂಡೊಯ್ದು ವಿದ್ಯಾರ್ಥಿ ಸಮುದಾಯಗಳನ್ನು ಜಾಗೃತಗೊಳಿಸಿ ಸಾಹಿತ್ಯದ ಬಗ್ಗೆ ಒಲವನ್ನು ಮೂಡಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ, ಶ್ರಮಿಕರ, ರೈತರ, ಶೋಷಿತರ ನಡುವೆ ಸಾಹಿತ್ಯದ ಕೊಂಡಿಯಾಗಿ ಪರಿಷತ್ತು ಕಾರ್ಯ ನಿರ್ವಹಿಸುತ್ತಿದೆ ಎಂದ ಅವರು,

Contact Your\'s Advertisement; 9902492681

ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಅವರ ಬಳಗ ಬಹಳ ಕ್ರಿಯಾಶೀಲವಾಗಿ ಕಾರ್ಯ ಮಾಡುತ್ತಿದ್ದು, ಪರಿಷತ್ತನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಕಟ್ಟುತ್ತಿದ್ದು, ಉತ್ತಮ ಮತ್ತು ಹೊಸ ಹೆಜ್ಜೆಗಳನ್ನು ಇಡುವ ಮೂಲಕ ಸಾಹಿತ್ಯಸಾಂಸ್ಕøತಿಕ ಕ್ಷೇತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತಿದ್ದಾರೆ.

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಇದುವರೆಗೂ ಕೇವಲ ಸಾಹಿತಿಗಳ ಸಮೀಪದಲ್ಲಿತ್ತು. ಅದು ಎಲ್ಲ ಕನ್ನಡಿಗರ ಆಸ್ತಿ ಎಂದು ತೋರಿಸಲಿಕ್ಕೆ ಹೊರಟಿರುವ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಕಾರ್ಯ ಶ್ಲಾಘನೀಯ ಎಂದು ಮನದುಂಬಿ ಹಾರೈಸಿದರು.

ಯಾದಗಿರಿ ಶಾಸಕ ಚೆನ್ನಾರೆಡ್ಡಿ ತುನ್ನೂರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ನಾಗನ್ನಾಥ ಯಳಸಂಗಿ ನಿಂಬರ್ಗಾ, ಪ್ರಮುಖರಾದ ನೀಲಕಂಠರಾವ ಮೂಲಗೆ, ಜಗನ್ನಾಥ ಗೋದಿ, ಪರಮೇಶ್ವರ ಖಾನಾಪೂರ, ದೇವೇಂದ್ರಪ್ಪ ಮರತೂರ, ಮಲ್ಲಿಕಾರ್ಜುನ ಪೂಜಾರಿ, ಪ್ರಶಾಂತ ಕೊರಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here