6ನೇ ಶರಣ ಸಂಸ್ಕøತಿ ಉತ್ಸವ ಜ.14ರಿಂದ

0
39

ಕಲಬುರಗಿ: ಹಾವೇರಿ ಜಿಲ್ಲೆಯ ನರಸೀಪುರದಲ್ಲಿ ಜ.14 ಮತ್ತು 15ರಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥ ಮಹಾಮಹೋತ್ಸವ ಸೇರಿ ನಾನಾ ಕಾರ್ಯಕ್ರಮ ನಡೆಯಲಿವೆ ಎಂದು ಕೋಲಿ ಕಬ್ಬಲಿಗ ಸಮಾಜದ ರಾಜ್ಯಾಧ್ಯಕ್ಷ ಬಸವರಾಜ ಸಪ್ಪನಗೋಳ ಹೇಳಿದರು.

ನರಸೀಪೂರದ ಶ್ರೀನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ಈ ಬಾರಿ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ, ಲಿಂ.ಶ್ರೀ ಶಾಂತಮುನಿ ಸ್ವಾಮೀಜಿಗಳ 8ನೇ ಸ್ಮರಣೋತ್ಸವ, ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳ 8ನೇ ಪೀಠಾರೋಹಣ ಮಹೋತ್ಸವ, ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮಗಳು ಜ.14 ಮತ್ತು 15ರಂದು ನಡೆಯಲಿವೆ ಎಂದು ಹೇಳಿದರು.

Contact Your\'s Advertisement; 9902492681

ಜ.14ರಂದು ಬೆಳಗ್ಗೆ 6ಕ್ಕೆ ಸುಮಂಗಲೆಯರಿಂದ ತೊಟ್ಟಿಲೋತ್ಸವ, 8ಕ್ಕೆ ನಿಜ ಶರಣ ಅಂಬಿಗರ ಚೌಡಯ್ಯನವರ ಗದ್ದುಗೆ ಪೂಜೆ, ಬೆಳಗ್ಗೆ 11ಕ್ಕೆ ರಕ್ತದಾನ ಶಿಬಿರ, ಮಧ್ಯಾಹ್ನ 1.30ಕ್ಕೆ ವಚನ ಕಂಠಪಾಠ ಸ್ಪರ್ಧೆ, ಸಂಜೆ 5.30ಕ್ಕೆ ಸಾಂಸ್ಕೃತಿಕ ಮತ್ತು ಜಾನಪದ ಕಲಾ ಮಹೋತ್ಸವದ ಉದ್ಘಾಟನೆ ನಡೆಯಲಿದ್ದು, ದಿವ್ಯ ಉಪಸ್ಥಿತಿ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಸವಿವ ಮಂಕಾಳ ವೈದ್ಯ, ಶಾಸಕ ಪ್ರಕಾಶ ಕೋಳಿವಾಡ ಸೇರಿ ಹಲವು ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಜ.15ರಂದು ಬೆಳಗ್ಗೆ 8ಕ್ಕೆ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರಿಂದ ಧರ್ಮ ಧ್ವಜಾರೋಹಣ ನಡೆಯಲಿದೆ. ಬೆಳಗ್ಗೆ 8.30ಕ್ಕೆ ಸಾಮೂಹಿಕ ವಿವಾಹ, 10ಕ್ಕೆ ಧರ್ಮ ಸಭೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ, ನಿಜ ಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಹಲವು ಸ್ವಾಮೀಜಿಗಳು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಈ ಭಾಗದ ಸಮುದಾಯದ ಜನರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪಿಡಪ್ಪ ಜಾಲಗಾರ, ವಿದ್ಯಾಧರ ಮಂಗಳೂರು, ಪಿತಾಂಬರ ಕೋಲಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here