ಸುರಪುರ: ಕೃಷ್ಣಾಪುರ ಸರ್ಕಲ್‍ನ ಚಿಕ್ಕಹೊನ್ನಕುಣಿ ಉಪ ವಿಭಾಗದ ಕೆ.ಬಿ.ಜೆ.ಎನ್.ಎಲ್ ಸಹಾಯಕ ಅಭಿಯಂತರ ಗಣೇಶ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಮುಖಂಡರು ಆಗ್ರಹಿಸಿದರು.
ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ,ಕೆಬಿಜೆಎನ್‍ಎಲ್ ಕೃಷ್ಣಾಪುರ ಸರ್ಕಲ್‍ನ ಚಿಕ್ಕಹೊನಕುಣಿ ಉಪ ವಿಭಾದ ಎ.ಯ ಗಣೇಶ ಗುತ್ತೇದಾರರಿಗೆ ಪರ್ಸೆಂಟೇಜ್ ನೀಡುವಂತೆ ಕಿರಕುಳ ನೀಡುತ್ತಿದ್ದಾರೆ,ದೇವದುರ್ಗ ಶಾಸಕರಿಗೆ,ನೀರಾವರಿ ಸಚಿವರಿಗೆ ಹಣ ಕೊಡಬೇಕು,ಆದ್ದರಿಂದ ನಮ್ಮ ಸಾಹೇಬರು ಹೇಳಿದ್ದಾರೆ.ಆದ್ದರಿಂದ ತಾವು ಹಣ ಕೊಡಬೇಕು ಇಲ್ಲದಿದ್ದರೆ ನಿಮ್ಮ ಕೆಲಸ ಮಾಡುವುದಿಲ್ಲ ಎಂದು ರಾಜಾರೋಷವಾಗಿ ಹೇಳುತ್ತಿದ್ದು,ಇದರಿಂದ ಗುತ್ತೇದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಸ್ಥಿತಿ ನಿರ್ಮಾಣವಾಗುತ್ತಿದೆ,ಆದ್ದರಿಂದ ಕೂಡಲೇ ಈ ಎ.ಇ ಗಣೇಶ ಅವರನ್ನು ಅಮಾನತುಗೊಳಿಸಬೇಕು ಇಲ್ಲವಾದಲ್ಲಿ ಕೃಷ್ಣಾಪುರ ಕೆಬಿಜೆಎನ್‍ಎಲ್ ಎಸ್.ಇ ಆಫೀಸ್ ಮುಂದೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಂತರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬರೆದ ಮನವಿಯನ್ನು ಕೃಷ್ಣಾಪುರ ಎಸ್.ಇ ಕಚೇರಿ ಸಿಬ್ಬಂದಿ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ರಮೇಶಗೌಡ,ತಾಲೂಕು ಅಧ್ಯಕ್ಷ ದಾವಲಸಾಬ್,ಆಟೋ ಚಾಲಕರ ಸಂಘದ ಅಧ್ಯಕ್ಷ ವೆಂಕಟೇಶ ನಾಯಕ ಸೇರಿದಂತೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…