ಕಲಬುರಗಿ; ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನೊಳಗೊಂಡ ಪೀಠವು ಇದೇ ಜನವರಿ 16 ಹಾಗೂ 17 ರಂದು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಯನಿರ್ವಹಿಸಲಿದೆ.
ಜಿಲ್ಲೆಯಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂದು ಪೀಠವು ಸಿಟ್ಟಿಂಗ್ ನಡೆಸಿ ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಅಹವಾಲು ಆಲಿಸಿ ಪರಿಶೀಲಿಸಿ ಸ್ಥಳದಲ್ಲಿಯೆ ಪ್ರಕರಣಗಳನ್ನು ವಿಲೇವಾರಿ ಮಾಡಲಿದೆ.
ಸಾರ್ವಜನಿಕರು, ದೂರುದಾರರು ಹಾಗೂ ಮಾನವ ಹಕ್ಕುಗಳ ಸಂಘ- ಸಂಸ್ಥೆಗಳು ಮಾನವ ಹಕ್ಕುಗಳ ಉಲ್ಲಂಘನೆ ಕುರಿತಂತೆ ಯಾವುದೇ ದೂರುಗಳಿದ್ದಲ್ಲಿ ಅಂದು ಪೀಠದ ಮುಂದೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.