ಕಲಬುರಗಿ; ಜಿಲ್ಲೆಯ ಸೇಡಂ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿ ಈ ಹಿಂದೆ ಮಂತ್ರಿಯಾಗಿ ಉತ್ತಮ ಕೆಲಸ ಮಾಡಿರುವ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರಿಗೆ ಡಿಸಿಎಂ ಸ್ಥಾನನೀಡುವಂತೆ ಚಿಂಚೋಳಿ ತಾಲೂಕಿನ ಮುಸ್ಲಿಂ ಕಮಿಟಿ ತಾಲೂಕು ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಸ್ತಾನ ಅಲಿ ಪಟ್ಟೆದಾರ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಡಾ. ಶರಣಪ್ರಕಾಶ ಪಾಟೀಲ್ ಜಿಲ್ಲೆಯಲ್ಲೇ ಅತ್ಯಧಿಕ ಮತಗಳಿಂದ ಚುನಾಯಿತರಾಗಿರುವುದು ಅವರ ಕಾರ್ಯಕ್ಷಮತೆಗೆ ಹಿಡಿದ ಕೈಗನ್ನಡಿ. ಪ್ರಮುಖವಾಗಿ ಅತ್ಯಂತ ದಕ್ಷ, ಪ್ರಾಮಾಣಿಕವಾಗಿ ಉತ್ತಮ ಕೆಲಸ ಕಾರ್ಯ ನಿರ್ವಹಿಸಿ ಎಲ್ಲರಿಂದಲೂ ಮೆಚ್ಚುಗೆ ಪಡೆದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದ್ದರಿಂದ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಪ್ರಾಮಾಣಿಕ, ಸೌಮ್ಯ ಸ್ವಭಾವದಮೇರು ವ್ಯಕ್ತಿತ್ವದ ಸಹೃದಯಿ, ಕಳಂಕ ರಹಿತ ರಾಜಕಾರಣಿಯಾಗಿರುವ ಡಾ. ಶರಣಪ್ರಕಾಶ್ ಪಾಟೀಲ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಆ ಸ್ಥಾನಕ್ಕೆ ಗೌರವ ತರುವ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಪಟ್ಡೆದಾರ ತಿಳಿಸಿದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…