ಕಲಬುರಗಿ: ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ 2024ರ ಜನವರಿ 18 ರಿಂದ 27 ರವರೆಗೆ ಹತ್ತು ದಿನಗಳ ಕಾಲ ಉಚಿತವಾಗಿ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‍ಸೆಟ್ ನಿರ್ದೇಶಕರು ತಿಳಿಸಿದ್ದಾರೆ.
ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‍ಜಿಎನ್‍ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2024ರ ಜನವರಿ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಇದೇ 2024ರ ಜನವರಿ 16 ರಂದು 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…