ಫಾತೀಮಾ ಶೇಖ್, ಸಾವಿತ್ರಿ ಬಾಯಿ ಫುಲೆ, ಕುವೆಂಪು ಜಯಂತಿ ಆಚರಣೆ

ಅನೇಕಲ್: ಗಂಧದನಾಡು ಜನಪರ ವೇದಿಕೆ-ಗಜವೇ ಹಾಗೂ ಡಾ.ಗೋಪಾಲರಾಜು ಪ್ರಥಮ ದರ್ಜೆ ಕಾಲೇಜು ವತಿಯಿಂದ ಭಾರತದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ, ಅಕ್ಷರದಾತೆ ಫಾತಿಮಾ ಶೇಖ್ ಹಾಗೂ ರಾಷ್ಟ್ರಕವಿ ಕುವೆಂಪು ರವರ ಜನ್ಮ ದಿನಾಚರಣೆ ಮತ್ತು ಗಜವೇ 2024ರ ಕ್ಯಾಲೆಂಡರ್ ಲೋಕಾರ್ಪಣೆ ಮಾಡಲಾಯಿತು.

ಗೋಪಾಲರಾಜು ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆನೇಕಲ್ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ, ಬೇರು ಸಂಸ್ಥೆಯ ನಿರ್ದೇಶಕಿ ಡಾ.ಮಮತಾ, ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಹೇಮಾವತಿ ಬಿ.ಎಸ್., ಗಜವೇ ಸಂಸ್ಥಾಪಕ ವಿಜಯರಾಮ, ರಾಜ್ಯ ಖಜಾಂಚಿ ಬಂಡಾಪುರ ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ ರವರು ಮಾತನಾಡಿ ಅಕ್ಷರ ಮಾತೆ ಸಾವಿತ್ರಿ ಬಾಫುಲೆ, ಫಾತಿಮಾ ಶೇಖ್ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಸಂದೇಶ, ಕೊಡುಗೆ, ತ್ಯಾಗಗಳನ್ನು ನೆನಪು ಮಾಡಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು ಶ್ಲಾಘನೀಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾವಿತ್ರಿ ಬಾಫುಲೆ ಹಲವು ಕಷ್ಟ ನಷ್ಟಗಳನ್ನು ಅನುಭವಿಸಿ ಹೆಣ್ಣು ಮಕ್ಕಳಿಗೆ ಅಕ್ಷರವನ್ನು ಕಲಿಸುವ ಮೂಲಕ ಜ್ಞಾನಾರ್ಜನೆ ದಾರಿ ಮಾಡಿಕೊಟ್ಟರು. ವಿದ್ಯಾರ್ಥಿ ವೇತನವನ್ನು ನೀಡುವ ಮೂಲಕ ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚು ತೆರೆದುಕೊಳ್ಳುವಂತೆ ದಾರಿದೀಪವಾದರು ಎಂದು ಅವರು ಸ್ಮರಿಸಿದ್ದಾರೆ.

ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಹೇಮಾವತಿ ರವರು “ನನ್ನ ತಂದೆ ನನಗೆ ಎರಡು ಡಿಗ್ರಿ ಗಳನ್ನಾದರೂ ಮಾಡಲು ಹೇಳಿದ್ದರು ಆದರೆ ನನಗೆ ಓದಿನ ಗೀಳಿನಿಂದಾಗಿ ಪಿ.ಎಚ್.ಡಿ ಸೇರಿದಂತೆ 4ಡಿಗ್ರಿಗಳನ್ನು ಮಾಡಿದ್ದೇನೆ. ಹೀಗೆ ನನ್ನ ವಿದ್ಯಾರ್ಥಿಗಳು ಚೆನ್ನಾಗಿ ಓದಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.”

ಕಾಲೇಜಿನ ಮತ್ತೊರ್ವ ಪ್ರಾಧ್ಯಾಪಕರಾದ ರಾಮಕೃಷ್ಣಪ್ಪ ಕುವೆಂಪು ರವರ ಓ ನನ್ನ ಚೇತನ ಆಗು ನೀ ಅನಿಕೇತನ ಗೀತೆಯನ್ನು ಹಾಡುತ್ತಾ ಅಂಬೇಡ್ಕರರ ಚರಿತ್ರೆ ಮರೆತವರು ಚರಿತ್ರೆ ಸೃಷ್ಟಿಸಲಾರರು ಎಂಬ ಮಾತನ್ನು ಉಲ್ಲೇಖಿಸಿ ಮಾತನಾಡಿದರು.

ಪುರುಷ ಪ್ರಧಾನ ಸಮಾಜದ ಚೌಕಟ್ಟನ್ನು ಮೀರಿ ಜ್ಯೋತಿಬಾ ಫುಲೆ ರವರು ಸಾವಿತ್ರಿಬಾಯಿ ಫುಲೆ ರವರ ಶಿಕ್ಷಣಕ್ಕೆ ಅವಕಾಶ ಮಾಡಿಕೊಟ್ಟರು. ಇತಿಹಾಸದಲ್ಲಿ ಮಹನೀಯರು ಮಾಡಿದ ಸಾಧನೆಯ ಕಾರಣಕ್ಕೆ ನಾವೆಲ್ಲ ಇಂದು ಸೇರಿದ್ದೇವೆ ಎಂದು ಬೇರು ಸಂಸ್ಥೆಯ ನಿರ್ದೇಶಕಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಕೀಲ ಪುರುಷೋತ್ತಮ್ ಒಡೆಯರ್, ಗಜವೇ ರಾಜ್ಯ ಕಾರ್ಯದರ್ಶಿ ದೇವರಾಜ್ ನಾಯ್ಕ್, ಸಹ-ಕಾರ್ಯದರ್ಶಿ ಜಗದೀಶ್ ಅರಸು, ಸಂಘಟನಾ ಕಾರ್ಯದರ್ಶಿ ಚಂದ್ರಬಾಬು, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸ್ವಾಭಿಮಾನಿ ಸತೀಶ್, ರಾಜೇಶ್ , ತಿಮ್ಮರಾಯಪ್ಪ, ಮಹಾಂತಲಿಂಗಾಪುರ ಮಂಜು , ಕೌಶಿಕ್ ರೆಡ್ಡಿ , ವರುಣ್ , ಕುಮಾರ್ , ಕಾನೂನು ವಿದ್ಯಾರ್ಥಿನಿ ಶಶಿ ಜನಧನಿ ಅಧ್ಯಾಪಕರಾದ ರಾಮಕೃಷ್ಣಪ್ಪ ಹಾಗೂ ಸಹ ಪ್ರಾಧ್ಯಾಪಕರು, ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420