ಬಿಸಿ ಬಿಸಿ ಸುದ್ದಿ

ಕನ್ನಡ ಜ್ಯೋತಿ ರಥಯಾತ್ರೆ; ಕಲಬುರಗಿ ಕಸಾಪದಲ್ಲಿ ಪೂರ್ವಭಾವಿ ಸಭೆ

ಕಲಬುರಗಿ: ನಗರಕ್ಕೆ ಶುಕ್ರವಾರ ಆಗಮಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಶುಕ್ರವಾರ ನಡೆಸಿದ ಪೂರ್ವಸಿದ್ಧತಾ ಸಭೆಯಲ್ಲಿ ಪದಾಧಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿ ಯಶಸ್ವಿಗೆ ಪೂರಕವಾಗಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷಗಳು ಪೂರೈಸಿರುವ ಹಿನ್ನೆಲೆ ಕರ್ನಾಟಕ ಸರ್ಕಾರವು ವರ್ಷಪೂರ್ತಿಯಾಗಿ ಹಮ್ಮಿಕೊಂಡಿರುವ `ಕನ್ನಡ ಜ್ಯೋತಿ ರಥ ಯಾತ್ರೆ’ ಶನಿವಾರ ಕಲಬುರಗಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾ ಕನ್ನಡ ಸಾಹಿತ್ಯ ಪರಷತ್ತಿನ ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕನ್ನಡ ಹಬ್ಬದಂತಿರುವ ಈ ಸಂಭ್ರಮಕ್ಕೆ ಸಾಕ್ಷಿಯಾಗಬೇಕೆಂದು ಪೂರ್ವಸಿದ್ಧತಾ ಸಭೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮನವಿ ಮಾಡಿಕೊಂಡರು.

ನಂತರ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ನಮ್ಮ ಕನ್ನಡ ನಾಡಿನಲ್ಲಿ ಇರುವ ನಾವುಗಳು ನಮ್ಮ ದಿನನಿತ್ಯದ ಬದುಕಿನಲ್ಲಿ ಕನ್ನಡ ಬಳಸುವುದು ಅನಿವಾರ್ಯ ಎಂಬ ವಾತಾವರಣ ಮೂಡಿಸಿದಾಗ ಮಾತ್ರ ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಎಂಬುದು ಸಾಬೀತು ಮಾಡಿದಂತಾಗುತ್ತದೆ. ನಮ್ಮ ಅವಧಿಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮ ಬಂದಿರುವುದು ನಮ್ಮ ಭಾಗ್ಯವೇ ಸರಿ ಎಂಬ ಭಾವನೆ ನಾವೆಲ್ಲರೂ ಇಟ್ಟುಕೊಳ್ಳಬೇಕು ಎಂದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಸಂಘಟನಾ ಕಾರ್ಯದರ್ಶಿ ರವೀಂದ್ರಕುಮಾರ ಭಂಟನಳ್ಳಿ, ಸಹ ಕಾರ್ಯದರ್ಶಿಗಳಾದ ಶಿಲ್ಪಾ ಜೋಶಿ, ರಾಜೇಂದ್ರ ಮಾಡಬೂಳ, ಪ್ರಮುಖರಾದ ಬಾಬುರಾವ ಪಾಟೀಲ ಚಿತ್ತಕೋಟಾ, ಹೆಚ್.ಎಸ್. ಬರಗಾಲಿ, ನಾಗನ್ನಾಥ ಯಳಸಂಗಿ, ಎಸ್ ಎಂ ಪಟ್ಟಣಕರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

21 mins ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

6 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

18 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

20 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

20 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

20 hours ago