ಬಿಸಿ ಬಿಸಿ ಸುದ್ದಿ

ಅಖಿಲಭಾರತ ಶಿವಾನುಭವ ಮಂಟಪದಲ್ಲಿ ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅಪ್ಪ ಅವರ 36ನೇ ಪುಣ್ಯಸ್ಮರಣೋತ್ಸವ

ಕಲಬುರಗಿ: ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಅಖಿಲಭಾರತ ಶಿವಾನುಭವ ಮಂಟಪ, ಶರಣಬಸವೇಶ್ವರ ಸಂಸ್ಥಾನದ ಅಡಿಯಲ್ಲಿ ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅಪ್ಪ ಅವರ 36ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಅವರ ಶಿವ-ಜೀವನವನ್ನು ಕುರಿತು ಅಂತಿಮ ಸುತ್ತಿನ ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಗಿತ್ತು.

ಸಂಗೀತ ವಿಭಾಗದ ಪ್ರಾಧ್ಯಾಪಕರಾದ ಡಾ.ಛಾಯಾ ಭರತನೂರ ಅವರ ಪ್ರಾರ್ಥನಾಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಅಖಿಲಭಾರತ ಶಿವಾನುಭವ ಮಂಟಪದ ಸಂಚಾಲಕರಾದ ಡಾ. ಶಿವರಾಜ ಶಾಸ್ತ್ರಿ ಹೇರೂರ್ ಅವರು ಈ ಕಾರ್ಯಕ್ರಮದ ನೇತ್ರತ್ವ ವಹಿಸಿ ಸರ್ವರನ್ನು ಸ್ವಾಗತಿಸಿದರು. ಗೌರವ ಅತಿಥಿಗಳಾಗಿ ಆಗಮಿಸಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ್ ಅವರು ಮಾತನಾಡುತ್ತ, ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅವರು ”ನುಡಿದಂತೆ ಎಲ್ಲವೂ ನಡೆಯುತಿತ್ತು,” ಇದು ಸಿದ್ದಿ ಸಾಧಿಸಿದವರಿಗೆ ಮಾತ್ರ ಸಾದ್ಯವೆಂದು, ಅವರ ಎಂಭತ್ತು ವರ್ಷಗಳ ಆಧ್ಯಾತ್ಮಿಕ ಮತ್ತು ಲೌಕಿಕ ಜೀವನದ ಸಾರ್ಥಕ ಬದುಕಿನ ಬಗ್ಗೆ ವಿವರಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಅನಿಲಕುಮಾರ ಬಿಡವೆ ಮತ್ತು ಮೌಲ್ಯ ಮಾಪನ ಕುಲಸಚಿವರಾದ ಡಾ. ಲಿಂಗರಾಜ ಶಾಸ್ತ್ರಿಯವರು ಅಂತಿಮ ಸುತ್ತಿನ ಸ್ಪರ್ಧೆಯ ತಿರ್ಪುಗಾರರಾಗಿ ಉಪಸ್ಥಿತರಿದ್ದರು.

ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಡಿ.ಟಿ.ಅಂಗಡಿ ಅವರು, ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅವರು ಅಂದು ಬಿತ್ತಿದ ಜ್ಙಾನ ದಾಸೋಹ ಬೀಜ ಇಂದು ಹೆಮ್ಮರವಾಗಿ ಬೆಳೆದು ಎಂಭತ್ತು ವಿದ್ಯಾಲಯಗಳಿಗಿಂತ ಹೆಚ್ಚಿನ ವಿದ್ಯಾಲಯ,  ಮತ್ತು ಮಹಾವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಂತರವಾಗಿ ಜ್ಙಾನ ದಾಸೋಹ ಮಾಡುತ್ತ ಪೂಜ್ಯ ದೊಡ್ಡಪ್ಪ  ಅಪ್ಪ ಅವರು ಜ್ಙಾನಪ್ರಸಾದದ ರೂಪದಲ್ಲಿ ಇಂದಿಗೂ ಕ್ರಿಯಾಶೀಲರಾಗಿದ್ದಾರೆ ಅದೇ ರೀತಿ ಸುಮಾರು ಮೂವತ್ತು ಸಾವಿರಕಿಂತ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು ರಾಜ್ಯ, ರಾಷ್ಟ್ರ ಹಾಗೂ ಅಂತರ್‌ರಾಷ್ಟೀಯ ಮಟ್ಟದಲ್ಲಿ ಅನೇಕ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು ಈ ಸಂಸ್ಥೆಯನ್ನು ಹಾಗೂ ಪೂಜ್ಯ ದೊಡ್ಡಪ್ಪ  ಅಪ್ಪ ಅವರನ್ನು ಇಂದಿಗೂ ಸ್ಮರಿಸುವಂತಾಗಿದೆ. ಪ್ರಸ್ತುತ ಪೀಠಾಧಿಪತಿಗಳಾಗಿರುವ ಪರಮ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರು ನಿರಂತರವಾಗಿ ಶಿಕ್ಷಣಕ್ಕೆ ಹೆಚ್ಚು ಪ್ರೊತ್ಸಾಹ ನೀಡುತ್ತ

ಈ ಭಾಗದಲ್ಲಿ ಪ್ರಪ್ರಮಥಮವಾಗಿ ಖಾಸಗಿ ವಿಶ್ವವಿದ್ಯಾಲಯ ಸ್ಥಾಪಿಸಿ, ಶರಣಬಸವ ವಿಶ್ವವಿದ್ಯಾಲಯದ ನಿರ್ಮಾತ್ರು ಆಗಿದ್ದಾರೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ಧಾರೆ ಅಂತರ್‌ರಾಷ್ಟೀಯ ಮಟ್ಟದಲ್ಲಿ ಉನ್ನತ ಶಿಕ್ಷಣಕ್ಕೆ  ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿದ್ದಾರೆ. ಈ ಶುಭ ಸಂಧರ್ಭದಲ್ಲಿ ದೊಡ್ಡಪ್ಪ ಅವರ ೩೬ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ನಮ್ಮ ಮಹಾವಿದ್ಯಾಲಯದಲ್ಲಿ ಅಂತಿಮ ಸುತ್ತನ ಭಾಷಣ ಸ್ಪರ್ಧೆ ಹಮ್ಮಿಕೊಂಡಿದ್ದು ಸಂತೋಷವಾಗಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.

ಶಿಕ್ಷಣ ಶಾಸ್ತ್ರದ ಪ್ರಾಧ್ಯಾಪಕರಾದ ಪ್ರೋ.ಶರಣಮ್ಮ ವಾರದ್ ಕಾರ್ಯಕ್ರಮ ನಿರೂಪಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

21 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago