ಕಲಬುರಗಿ: ವಿಶ್ವದಲ್ಲಿ ಅನೇಕ ಭಾಷೆಗಳನ್ನು ಆಡುತ್ತಾರೆ, ಆ ಅನೇಕ ಭಾಷೆಗಳಲ್ಲಿ ಹಿಂದಿ ಭಾಷೆಯು ತನ್ನದೇ ಆದ ಒಂದು ಸಮೂಹವನ್ನು ನಿರ್ಮಿಸಿಕೊಂಡು ಶಕ್ತಿಶಾಲಿ ಭಾಷೆಯಾಗಿ ಹೊರಹೊಮ್ಮುತ್ತಿದೆ ಎಂದು ಸೇಡಂ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ವಿಲಾಸ ಸಾಳುಂಕೆಯವರೂ ನುಡಿದರು.
ಕಲ್ಯಾಣ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗ ಆಯೋಜಿಸಿದ ವಿಶ್ವ ಹಿಂದಿ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಭಾರತದ ವಿವಿಧ ಕ್ಷೇತ್ರಗಳಲ್ಲಿ ವಿವಿಧ ಭಾಷೆಗಳನ್ನು ಮಾತನಾಡುತ್ತಾರೆ, ಆದರೂ ಹಿಂದಿ ಭಾಷೆಯು ಎಲ್ಲರನ್ನೂ ಒಂದು ಗುಡಿಸುವ ಕೆಲಸ ಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ವಹಿಸಿಕೊಂಡು ಹಿಂದಿ ಭಾಷೆಯ ಮತ್ತು ವಿಶ್ವ ಹಿಂದಿ ದಿವಸ ಆಚರಣೆಯ ಮಹತ್ವದ ಕುರಿತು ಮಾತನಾಡಿದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಪ್ರೆಮಚಂದ ಚವ್ಹಾಣ ಅವರು ಸ್ವಾಗತ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಶ್ರೀಮತಿ ಕವಿತಾ ಠಾಕೂರ ಅವರು ವಂದಿಸಿದರು, ಶ್ರೀಮತಿ ಸುಷ್ಮಾ ಕುಲಕರ್ಣಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿದ್ದರು, ಕು. ಸೋನಮ್ಮ ಪ್ರಾರ್ಥನಾ ಗೀತೆ ಹಾಡಿದರು.
ಕಾರ್ಯಕ್ರಮದಲ್ಲಿ ಡಾ. ಮಹೇಶ ಗಂವ್ಹಾರ್, ಡಾ. ಮೋಹನರಾಜ ಪತ್ತಾರ, ಡಾ. ಶಿವರಾಜ್ ಗೌನಹಳ್ಳಿ, ಡಾ. ವೈಜಿನಾಥ ವರ್ಮಾ, ಶಿವಲೀಲಾ ಧೋತ್ರೆ, ಡಾ. ನಾಗರತ್ನ, ಶ್ರೀಮತಿ ಗೀತಾ ಪಾಟೀಲ್,ಡಾ. ಜ್ಯೋತಿ ಪ್ರಕಾಶ, ಡಾ. ವಿಶ್ವನಾಥ ದೇವರಮನಿ, ಡಾ. ರಾಜೇಶ, ಡಾ. ಸುಭಾಶ್ಚಂದ್ರ ದೊಡ್ಡಮನಿ,ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…