ಬಿಸಿ ಬಿಸಿ ಸುದ್ದಿ

ದ್ವೀತಿಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಲಬುರಗಿ: ಮಾತೋಶ್ರೀ ಕಲ್ಯಾಣೀ ಸ್ಮಾರಕ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀಗುರು ಸ್ವತಂತ್ರ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ಪಿ.ಯು.ಸಿ. ದ್ವೀತಿಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭವನ್ನು ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಕಲಬುರಗಿ, ಉಪನಿರ್ದೇಶಕರಾದ ಪೆÇ್ರ. ಶಿವಶರಣಪ್ಪ ಮುಳೆಗಾಂವ್ ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ ಶ್ರೀಗುರು ಕಾಲೇಜಿನ ಸಂಸ್ಥಾಪಕರಾದ ಪೆÇ್ರೀ. ಎ.ವೈ. ನಾಯ್ಕ ಸರ್ ಅವರು ಶ್ರೀ ಗುರು ಪ.ಪೂ.ಕಾಲೇಜನ್ನು ಆರಂಭಿಸಿರುವುದರೊಂದಿಗೆ, ಶೈಕ್ಷಣಿಕ-ಸ್ಪರ್ಧಾತ್ಮಕ ಯುಗದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಶೈಕ್ಷಣಿಕ ಭದ್ರ ಬುನಾದಿಯನ್ನು ಹಾಕಿಕೊಟ್ಟಿದ್ದಾರೆ. ಅವರ ನಂತರ ಸಂಸ್ಥೆಯನ್ನು ಶ್ರೀ ನಿತಿನ ನಾಯ್ಕ ಅವರು ಮುನ್ನಡೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ಸಂಗತಿ.
ಭವಿಷ್ಯದ ನಾಗರೀಕರಾದ ನೀವು ದ್ವಿತೀಯ ಪಿ.ಯು.ಸಿ. ಪಾಸಾಗುವುದು ಸುಲಭ… ಆದರೆ ಜೀವನದ ಪರೀಕ್ಷೆಯಲ್ಲಿ ಪಾಸಾಗುವುದು ಕಷ್ಟ…!, ಯಾರು ಧನಾತ್ಮಕವಾದ ಕೌಶಲ್ಯವನ್ನು ಅಳವಡಿಸಿಕೊಂಡು ಮುಂದುವರೆಯುತ್ತಾರೆಯೋ ಅವರು ಜೀವನದ ಪರೀಕ್ಷೆಯಲ್ಲಿಯೂ ಸಹ ಪಾಸಾಗುತ್ತಾರೆ.

ಮುಂದುವರೆದು ಮಾತನಾಡುತ್ತಾ, ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡುವ ಮೂಲಕ ಭವ್ಯ ಭಾರತ ನಿರ್ಮಾಣದಲ್ಲಿ ನೀವೆಲ್ಲರೂ ಪಾಲ್ಗೊಳ್ಳಿರಿ ಎಂದು ಕರೆಯಿತ್ತರು. ಸಾಧನೆಯ ಹಾದಿಯಲ್ಲಿ ಶಕ್ತಿ ಹೀನರಾದವರಿಗೆ ದೇವರೂ ಸಹ ಕೈಹಿಡಿಯುವುದಿಲ್ಲ, ಯಾರೂ ಶಕ್ತಿವಂತರಾಗಿರುತ್ತಾರೋ ಅವರು ಯಶಸ್ಸು ಸಾಧಿಸುತ್ತಾರೆ, ಅದಕ್ಕಾಗಿ ಶಕ್ತಿಯೇ ಜೀವನ ಎಂಬ ತತ್ವವನ್ನು ಅರಿತು ಮುನ್ನುಗ್ಗಬೇಕು ಹಾಗೂ ತಂದೆ ತಾಯಿಗಳ ಶ್ರಮ ಮತ್ತು ತ್ಯಾಗಕ್ಕೆ ಗೌರವ ಕೊಡಬೇಕೆಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ವಿದ್ಯಾಸಾಗರ ಎಂ.ಗೋಗಿ, ಅವರು ಮಾತನಾಡುತ್ತಾ ನೀವು ಕಲಿತ ಜ್ಞಾನ/ವಿದ್ಯೆಯನ್ನು ಸಂದರ್ಭಕ್ಕನುಸಾರವಾಗಿ ಉಪಯೋಗಿಸಿಕೊಂಡು ನೀವು ಉತ್ತಮ ಬದುಕು ರೂಪಿಸಿಕೊಂಡು, ನಿಮ್ಮ ತಂದೆ ತಾಯಿಗಳ ಹಾಗೂ ನಿಮ್ಮ ಕನಸು ನನಸಾಗಿಸಲು ಸದಾ ಸ್ಪರ್ಧಾತ್ಮಕ ಪ್ರಯತ್ನ ಮಾಡಬೇಕೆಂದು ನುಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ನಳಿನಿ ಎ.ನಾಯ್ಕ ಅವರು ವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳಾದ ನೀವು ಏಕಾಗ್ರತೆಯಿಂದ ಓದಿ, ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರಬೇಕು. ಅದಕ್ಕೆ ಪೂರಕವಾದ ಎಲ್ಲಾ ರೀತಿಯ ಶೈಕ್ಷಣಿಕ ಸಹಕಾರ ಸೌಲಭ್ಯ ನೀಡುವುದಾಗಿ ಭರವಸೆಯಿತ್ತರು.

ಕಾರ್ಯದರ್ಶಿಗಳಾದ ನಿತಿನ್ ಎ.ನಾಯ್ಕ, ಆಡಳಿತಾಧಿಕಾರಿಗಳಾದ ನೆಹಾ ನಿತಿನ ನಾಯ್ಕ, ಆಡಳಿತ ಮಂಡಳಿಯ ಸದಸ್ಯರಾದ ಗುರುರಾಜ ಎ.ನಾಯ್ಕ ಹಾಗೂ ಭೋಧಕ-ಭೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು, ಪಾಲಕರು/ಪೆÇೀಷಕರು ಪಾಲ್ಗೊಂಡಿದ್ದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago