ಸುರಪುರ: ನಗರದ ಕುಂಬಾರಪೇಟದ ಮಲ್ಲಪ್ಪ ಭೀಮರಾಯರವರಿಗೆ ಕನ್ನಡ ವಿಶ್ವವಿದ್ಯಾಲಯ, ಹಂಪಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ.
ಮಲ್ಲಪ್ಪ ಭೀಮರಾಯರವರು ಕನ್ನಡ ವಿಶ್ವ ವಿದ್ಯಾಲಯದಲ್ಲಿನ ಸಮಾಜ ವಿಜ್ಞಾನಗಳ ನಿಕಾಯದ ಜಾನಪದ ಅಧ್ಯಯನ ವಿಭಾಗದ ಬಾಹ್ಯ ಮಾರ್ಗದರ್ಶಕರಾದ ಡಾ. ಸಿ. ಪುಟ್ಟೇಶ ಸಹ ಪ್ರಾಧ್ಯಾಪಕರು, ಸರ್ಕಾರಿ ವಿಜ್ಞಾನ ಕಾಲೇಜು, ನೃಪತುಂಗ ವಿಶ್ವ ವಿದ್ಯಾಲಯ, ಬೆಂಗಳೂರು ಅವರ ಮಾರ್ಗದರ್ಶನದಲ್ಲಿ “ಸುರಪುರ ತಾಲೂಕಿನ ತಳಸಮುದಾಯಗಳ ಪ್ರದರ್ಶನ ಕಲೆಗಳ ಆಧುನಿಕತೆ” ಎಂಬ ವಿಷಯದ ಮೇಲೆ ಸಂಶೋಧನೆಯನ್ನು ಕೈಗೊಂಡು ಪಿಎಚ್.ಡಿ. ಮಹಾಪ್ರಬಂಧವನ್ನು ಕನ್ನಡ ವಿಶ್ವವಿದ್ಯಾಲಯದ ಜಾನಪದ ವಿಭಾಗದಲ್ಲಿ ಸಲ್ಲಿಸಿ ಮಂಡಿಸಿರುತ್ತಾರೆ.
ಕನ್ನಡ ವಿಶ್ವವಿದ್ಯಾಲಯದ ೩೨ನೇ ನುಡಿ ಹಬ್ಬ(ಘಟಿಕೋತ್ಸವ)ದಲ್ಲಿ ಮಲ್ಲಪ್ಪ ಭೀಮರಾಯ ಅವರಿಗೆ ಕನ್ನಡ ವಿಶ್ವ ವಿದ್ಯಾಲಯ ಪಿಎಚ್.ಡಿ ಪದವಿಯನ್ನು ಅಂದು ನಡೆದ ಸಮಾರಂಭದಲ್ಲಿ ಕನ್ನಡ ವಿಶ್ವವಿದ್ಯಾಲಯದ ಸಮ ಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಆದಾ ಡಾ. ಎಂ. ಸಿ. ಸುಧಾಕರ ಮತ್ತು ಕನ್ನಡ ವಿಶ್ವ ವಿದ್ಯಾಲಯದ ಕುಲಪತಿಗಳು ಆದಾ ಡಾ. ಡಿ. ಎಂ.ಪರಮಶಿವಮೂರ್ತಿ ಅವರುಗಳಿಂದ ಪಿ.ಎಚ್.ಡಿ ಡಾಕ್ಟಾರೆಟ್ ಪದವಿಯ ಪ್ರಮಾಣ ಪತ್ರವನ್ನು ನುಡಿ ಹಬ್ಬದಲ್ಲಿ ನೀಡಿ ಗೌರವಿಸಲಾಯಿತು.
ಇವರ ಈ ಉನ್ನತ ಶಿಕ್ಷಣದ ಸಾಧನೆಗೆ ಕುಟುಂಬದವರು ಮತ್ತು ಕುಂಬಾರಪೇಟಯ ಸಮಸ್ತ ನಾಗರಿಕರು ಮತ್ತು ಆತ್ಮೀಯ ಗೆಳೆಯರು ಶುಭ ಹಾರೈಸಿರುವರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…