ಕಲಬುರಗಿ; ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನೀಡುವ ರಾಜ್ಯ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಚಂದ್ರಶೇಖರ ಪಾಟೀಲ್ ಯಳಸಂಗಿ ಆಯ್ಕೆಯಾಗಿದ್ದಾರೆ.
ವಿಜ್ಞಾನ ಕ್ಷೇತ್ರದಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಶಿಕ್ಷಕರಿಗೆ ನೀಡುವ ಪ್ರಶಸ್ತಿಯಾಗಿದೆ.
ಚಂದ್ರಶೇಖರ್ ಪಾಟೀಲ್ ರು ವೈಜ್ಞಾನಿಕವಾಗಿ ಉಪಯುಕ್ತ ಬೋಧನೆ, ಹೊಸ ಅವಿಷ್ಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತಿದ್ದಾರೆ. ಇಂತಹ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಹೊಸ ವಿಚಾರಗಳನ್ನು ಬಿತ್ತುತ್ತಿರುವುದನ್ನು ಗಮನಿಸಿದ ಕ.ರಾ.ಶಿಕ್ಷಕರ ಕಲ್ಯಾಣ ನಿಧಿಯು ಗುರುತಿಸಿ ಈ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ ಪಾಟೀಲ್ ಶಿಕ್ಷಕರು, ಆಳಂದ ತಾಲೂಕಿನ ನೆಲ್ಲೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.