ವಾಡಿ; ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಭಾರತೀಯ ಜನತಾ ಪಕ್ಷದ ಸ್ವಚ್ಛತಾ ಅಭಿಯಾನದ ಭಾಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು.
ಪಟ್ಟಣದ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯ, ಬಸವೇಶ್ವರ ವೃತ್ತ, ಶಿವಾಜಿ ವೃತ್ತ, ಸೇವಲಾಲ ಮಂದಿರ, ಹನುಮಾನ ದೇವಸ್ಥಾನ,ಡಾ ಬಿ ಆರ್ ಅಂಬೇಡ್ಕರ್ ವೃತ್ತಗಳಲ್ಲಿ ಸ್ವಚ್ಚತಾ ಕಾರ್ಯ ಮಾಡಲಾಯಿತು ಅದರಂತೆ ವಾರ್ಡ್ ನಲ್ಲಿರುವ ಪ್ರತಿ ದೇವಾಲಯಗಳ ಸ್ವಚ್ಚತಾ ಕಾರ್ಯದಲ್ಲಿ ನಮ್ಮ ಪಕ್ಷದವರ ತೊಡಗುತ್ತಿದ್ದಾರೆ.
ನೆಚ್ಚಿನ ಪ್ರಧಾನಿ ಮೋದಿ ಜಿ ಅವರ ಕರೆಯ ಮೆರೆಗೆ ಜನವರಿ 14 ರಿಂದ ಪ್ರಾರಂಭವಾದ ಈ ಅಭಿಯಾನ, ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಸಮಾರಂಭದ ದಿನವಾದ ಜನವರಿ 22 ರವರೆಗೆ ಮುಂದುವರಿಯಲಿದೆ ಎಂದರು.
ಅಯೋಧ್ಯೆಯ ಶ್ರೀರಾಮಮಂದಿರ ಪುನರ ನಿರ್ಮಾಣ ಆಗಿ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಧಾರ್ಮಿಕ ಹಾಗೂ ಪುಣ್ಯಸ್ಥಳಗಳ ಸ್ವಚ್ಚತಾ ಕಾರ್ಯದಲ್ಲಿ ಭಾಗಿಯಾಗುತ್ತಿರುವುದರಿಂದ ನಮ್ಮಲ್ಲಿ ಭಕ್ತಿಯೊಂದಿಗೆ ಧನ್ಯತಾ ಭಾವ ಮೂಡುತ್ತಿದೆ. ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಹಬ್ಬದ ವಾತಾರವಣ ಇದೆ.500 ವರ್ಷಗಳ ಕಾಲದ ಕನಸು ಸಾಕಾರಗೊಂಡಿದೆ ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ,ಮುಖಂಡರಾದ ವಿಠಲ ನಾಯಕ,ಅರ್ಜುನ ಕಾಳೇಕರ,ರಾಮಚಂದ್ರ ರೆಡ್ಡಿ,ಹರಿ ಗಲಾಂಡೆ ,ಕಿಶನ ಜಾದವ,ಆನಂದರಾವ ಡೌಳೆ, ಆನಂದ ಇಂಗಳಗಿ, ಅಯ್ಯಣ್ಣ ದಂಡೋತಿ, ಶಿವಕುಮಾರ ಹೂಗಾರ, ಪ್ರೇಮ್ ರಾಠೋಡ, ಮಲ್ಲಿಕಾರ್ಜುನ ಸಾತಖೇಡ, ಚಂದ್ರಶೇಖರ್ ಬೆಣ್ಣೂರ, ಬಸವರಾಜ್ ಪಗಡಿಕರ,ಚಂದ್ರಾಮ ರಾಜೋಳ್ಳಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…