ಬಿಸಿ ಬಿಸಿ ಸುದ್ದಿ

ಶರಣರ ವಚನಗಳು ಸಮಾಜವನ್ನು ಬದಲಾಯಿಸುವ ಸಂದೇಶ ನೀಡುತ್ತವೆ

ಸುರಪುರ: ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಸಂದೇಶವನ್ನು ಹೊಂದಿರುವ ಶರಣರ ವಚನಗಳು ಸದಾಕಾಲ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್ ಕೆ.ವಿಜಯಕುಮಾರ ಮಾತನಾಡಿದರು.

ನಗರದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಶಿವಯೋಗಿ ಸಿದ್ದರಾಮೇಶ್ವರರು 12ನೇ ಶತಮಾನದ ಬಸವಣ್ಣನವರ ಅನುಭವ ಮಂಟಪದಲ್ಲಿನ ಪ್ರಮುಖ ಶರಣರಲ್ಲಿ ಒಬ್ಬರಾಗಿದ್ದರು,ಅವರು ಈಗಿನ ಸೋಲಾಪುರವೆನ್ನುವ ಅಂದಿನ ಸೊನ್ನಲಾಪುರದಲ್ಲಿ ಕೆರೆ ಕಟ್ಟೆಗಳನ್ನು ಕಟ್ಟಿಸುವ ಮೂಲಕ ಜನರಿಗೆ ನೆರವಾಗಿದ್ದರು,ಶ್ರೀಶೈಲ ಮಲ್ಲಿಕಾರ್ಜುನನಿಗೆ ಅಂಬಲಿ ಕುಡಿಸಿದ ಶರಣ ಶಿವಯೋಗಿ ಸಿದ್ದರಾಮೇಶ್ವರರಾಗಿದ್ದಾರೆ ಎಂದರು.

ಕಲ್ಯಾಣದಲ್ಲಿನ ಅನುಭವ ಮಂಟಪದಲ್ಲಿದ್ದು ಅನೇಕ ವಚನಗಳನ್ನು ರಚಿಸುವ ಮೂಲಕ ಮಾನವ ಜನಾಂಗಕ್ಕೆ ತಮ್ಮ ಸಂದೇಶವನ್ನು ನೀಡಿದ್ದಾರೆ ಎಂದರು.

ಇದಕ್ಕು ಮುನ್ನ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ಬೋವಿ ವಡ್ಡರ ಸಮಾಜದ ಅನೇಕ ಮುಖಂಡರು ಭಾಗವಹಿಸಿ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಆಚರಣೆಗೆ ಮುನ್ನ ಪೂರ್ವಭಾವಿ ಸಭೆ ನಡೆಸದೆ ಜಯಂತಿ ಕಾರ್ಯಕ್ರಮವನ್ನು ಕಾಟಾಚಾರಕ್ಕೆ ಆಚರಣೆ ಮಾಡಿದಂತಿದೆ,ಮುಂದೆ ಈ ರೀತಿಯಾದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.ಬೋವಿ ವಡ್ಡರ ಸಮಾಜದ ಅಧ್ಯಕ್ಷ ನಾಗಪ್ಪ ಜಾಲಹಳ್ಳಿ ತಿಮ್ಮಾಪುರ,ಮುಖಂಡ ನಾಗಪ್ಪ ಕಟ್ಟಿಮನಿ ,ನಗರಸಭೆ ಸದಸ್ಯ ಮಲ್ಲೇಶಿ,ಹಣಮಂತ ಕಟ್ಟಿಮನಿ,ಗೋಪಾಲ ಚಂದನಕೇರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ನಗರದ ತಿಮ್ಮಾಪುರ ಬಳಿಯಲ್ಲಿನ ವಡ್ಡರ ಓಣಿ ಬಳಿಯ ಮುಖ್ಯ ರಸ್ತೆಯಲ್ಲಿನ ಶಿವಯೋಗಿ ಸಿದ್ದರಾಮೇಶ್ವರ ನಾಮಫಲಕದ ಬಳಿಯಲ್ಲಿ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಆಚರಿಸಲಾಯಿತು.ಸಿದ್ದರಾಮೇಶ್ವರರ ನಾಮಫಲಕಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಜಯಂತಿ ಆಚರಿಸಿದರು.ಅನೇಕ ಜನ ವಡ್ಡರ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago