ಸುರಪುರ: ನಗರದ ಝಂಡದಕೇರಾದ ಸಂತ್ರಸವಾಡಿ ಬಳಿಯಲ್ಲಿನ ಖಬರಸ್ಥಾನದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದು ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ.
ಸೋಮವಾರ ಬೆಳಿಗ್ಗೆ ಪ್ಲಾಸ್ಟಿಕ್ ವಸ್ತುಗಳನ್ನು ಆಯುವವರು ಈ ಸ್ಥಳಕ್ಕೆ ಹೋದಾಗ ನವಜಾತ ಶಿಶುವಿನ ಶವ ನೋಡಿ ಬೆಚ್ಚಿಬಿದ್ದು ಓಡಿ ಬಂದು ಅಲ್ಲಿರುವ ಜನರಿಗೆ ತಿಳಿಸಿದ್ದಾರೆ.ನಂತರ ಸ್ಥಳಕ್ಕೆ ಅನೇಕ ಜನರು ಆಗಮಿಸಿ ಶಿಶುವಿನ ಶವ ಕಂಡು ಎಸೆದು ಹೋದವರ ಕುರಿತು ಬೇಸರ ವ್ಯಕ್ತಪಡಿಸಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ನಂತರ ಸ್ಥಳಕ್ಕೆ ಪಿ.ಎಸ್.ಐ ಶರಣಪ್ಪ ಹವಲ್ದಾರ ಹಾಗು ಸಿಬ್ಬಂದಿಗಳು ಆಗಮಿಸಿ ಶಿಶುವಿನ ಶವವನ್ನು ತಾಲೂಕು ಆಸ್ಪತ್ರೆಗೆ ಕಳುಹಿಸಿ ನಂತರ ಆಸ್ಪತ್ರೆಯ ಹಿಂಬಾಗದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ತಿಳಿದುಬಂದಿದೆ.
ನವಜಾತ ಶಿಶುವನ್ನು ಎಸೆದು ಹೋಗಿರುವ ಹೆತ್ತವರ ಕುರಿತು ಝಂಡದಕೇರಾ ನಿವಾಸಿ ಆಕಾಶ ಕಟ್ಟಿಮನಿ ಮತ್ತಿತರರು ಬೇಸರ ವ್ಯಕ್ತಪಡಿಸಿ ಜನರು ಓಡಾಡುವ ಸ್ಥಳದಲ್ಲಿ ಈ ರೀತಿ ಶವ ಎಸೆದು ಹೋದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…