ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಂಪೂರದ ಶ್ರೀ ಜಡೆಶಂಕರಲಿಂಗ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮುಕ್ತಾಯ ಕಾರ್ಯಕ್ರಮದ ಅಂಗವಾಗಿ ಸೆ. 8 ರಂದು ಪ್ರತಿಭಾ ಪುರಸ್ಕಾರ, ಹೊಲಿಗೆ ಯಂತ್ರ ವಿತರಣೆ ಹಾಗೂ ಹಾಗೂ ೯ರಂದು ಪಲ್ಲಕ್ಕಿ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸೆ.೮ರಂದು ಬೆಳಿಗ್ಗೆ ೧೧.೩೦ಕ್ಕೆ ನಡೆಯುವ ಪ್ರತಿಭಾ ಪುರಸ್ಕಾರ, ಸಮಾಜದ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ, ಶಾಲಾ ಮಕ್ಳಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಕಾರ್ಯಕ್ರಮದ ಸಾನಿಧ್ಯವನ್ನು ಗುರುಬಸವ ಬೃಹನ್ಮಠದ ಶ್ರೀ ಶಿವಾನಂದ ಮಹಾಸ್ವಾಮಿಜಿ ವಹಿಸುವರು. ಪಾಳಾ ಮೂಲಕಟ್ಟಿಮನಿ ಹಿರೇಮಠದ ಶ್ರೀ ಡಾ.ಗುರುಮೂರ್ತಿ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಹೈ.ಕ.ಶಿ. ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ್ ಬಿಲಗುಂದಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ಕಲಬುರಗಿ ಸಹಕಾರ ಇಲಾಖೆಯ ಉಪನಿರ್ದೇಶಕ ವಿಶ್ವನಾಥ ಮಲಕೂಡ, ಭೂದಾಖಲೆಗಳ ಉಪನಿರ್ದೇಶಕ ಶಂಕರ ಬಸವರಾಜ ಖಾದಿ, ತಹಶೀಲ್ದಾರ್ ಜಗನ್ನಾಥ ಪೂಜಾರಿ, ವಿಜಯಕುಮಾರ್ ಜಿ.ಕಮರಡಗಿ, ಧೂಳಪ್ಪ ಗುರುಪಾದಪ್ಪ ಕೋಳಕೂರ, ಶಾಂತವೀರಪ್ಪ ಕಲ್ಯಾಣಿ, ಚಂದ್ರಶೇಖರ್ ಧನಶೆಟ್ಟಿ, ಅಶೋಕ ದೊಡ್ಡಮನಿ, ವಿನೋದಕುಮಾರ್ ಎಸ್,ಮೇಲಕೇರಿ ಆಗಮಿಸುವರು. ಇದೇ ಸಂದರ್ಭದಲ್ಲಿ ದಾನಿಗಳಿಗೆ ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮದ ನಂತರ ಮಹಾಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ೮.೩೦ರಿಂದ ಬೆಳಗಿನ ಜಾವದವರೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.
ಸೆ.೯ರಂದು ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೭ ಗಂಟೆವರೆಗೆ ಬ್ಯಾಂಡ್, ವಾಧ್ಯವೈಭವಗಳೊಂದಿಗೆ ನಗರದ ಮುಖ್ಯ ಬೀದಿಗಳಲ್ಲಿ ಶ್ರೀ ಜಡೆ ಶಂಕರಲಿಂಗ ದೇವರ ಪಲ್ಲಕ್ಕಿ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವ ಮೂಲಕ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಬಣಗಾರ ಸಮಾಜದ ಅಧ್ಯಕ್ಷ ಅಶೋಕ ಎನ್.ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ವಿನೋದಕುಮಾರ್ ಮೇಲಕೇರಿ ಅವರು ಮನವಿ ಮಾಡಿದ್ದಾರೆ.