ಬೆಂಗಳೂರು; ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಸಂಬಂಧಪಟ್ಟ ಉಪ ಪೊಲೀಸ್ ಆಯುಕ್ತರುಗಳನ್ನೇ ವೈಫಲ್ಯಕ್ಕೆ ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೆÇಲೀಸ್ ಮಹಾನಿರ್ದೇಶಕರ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೆÇಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ.
ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಪೆÇಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತದೆ. ಪೆÇಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಬೆಂಬಲವನ್ನು ಕೊಟ್ಟಿದ್ದು ಅದನ್ನು ದುರುಪಯೋಗ ಪಡಿಸಿಕೊಳ್ಳದೇ ಜನರಿಗೆ ಅನುಕೂಲವಾಗುವ ರೀತಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ವರ್ಗಾವಣೆಗಳಿಗೆ ಪೆÇಲೀಸ್ ಅಧಿಕಾರಿಗಳು ಹಾತೊರೆಯುವುದು ಕಂಡುಬಂದಿದೆ. ಸಾಧ್ಯವಾದಷ್ಟು ಇದನ್ನು ಕಡಿಮೆ ಮಾಡಬೇಕು. ಜಾತೀಯತೆ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ. ನಮ್ಮದು ಜಾತ್ಯತೀತ ರಾಷ್ಟ್ರ, ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ ಎಂದರು.
ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೆÇಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್‍ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೆÇಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು ಜಿಡಿಪಿ ಹೆಚ್ಚಾಗುತ್ತದೆ. ಹೂಡಿಕೆದಾರರು ಬರುತ್ತಾರೆ. ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಬೇಕು. ಕಳ್ಳತನ ಹೆಚಾಗುತ್ತಿದೆ ಎಂದರೆ ಗಸ್ತು ವ್ಯವಸ್ಥೆ, ಹೊಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ ಡಿಸಿಪಿಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದರು.
ಅಧಿಕಾರಿಗಳು ಪ್ರಸ್ತುತ ಪಡಿಸಿದ ಅಂಕಿ ಅಂಶ ತೃಪ್ತಿಕರವಾಗಿಲ್ಲ. ಮುಂದಿನ ವರ್ಷದ ವೇಳೆಗೆ ಕಾರ್ಯಕ್ಷಮತೆ ಉತ್ತಮವಾಗಿರಲಿ. ರಾಜ್ಯದ ಎಲ್ಲಾ ಪೆÇಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ರಾಜ್ಯದ ಎಲ್ಲಾ ಪೆÇಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು. ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಣ ಮಾಡಲಾಗುವುದು. ಬೆಂಗಳೂರು ನಗರದಲ್ಲಿ 8 ಹೆಚ್ಚುವರಿ ಉಪ ಪೊಲೀಸ್ ಆಯುಕ್ತರ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು. ರಾಜ್ಯವನ್ನು ಡ್ರಗ್ ಮುಕ್ತಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಪೆÇಲೀಸ್ ಐಟಿ-ವಿ2, ಐಟಿಪಿಎ ಸರಳ ಆಪ್, ಪೆÇಲೀಸ್ ಮಿತ್ರ ಚಾಟ್ ಬಾಟ್, ಸಿಜಿ ನೋಂದಣಿ ಪೆÇೀರ್ಟಲ್, ರಾಜ್ಯ ಪೆÇಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು. ಇದೇ ಹೊತ್ತಿನಲ್ಲಿ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೆÇಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.