ಜ. 23ರಂದು ಸಂಸದರ ಕಚೇರಿ ಚಲೋ: ಕೇಂದ್ರದ ವಿರುದ್ಧ ಸಹಿ ಸಂಗ್ರಹ

0
41
  • ಶ್ರಮಿಕರ ಬದುಕು ಉಳಿಸುವಂತೆ ಒತ್ತಾಯಿಸಿ ಸಿಐಟಿಯು ಸಹಿ ಸಂಗ್ರಹ

ಶಹಾಬಾದ : ಆಹಾರ, ಆರೋಗ್ಯ, ಶಿಕ್ಷಣ ಉಳಿಸಿ ದೇಶವನ್ನು ಅಭಿವೃದ್ಧಿಪಡಿಸುವಂತೆ, ಸಮಾನ ವೇತನ ನಿಗದಿಪಡಿಸಿ ಶ್ರಮಿಕರ ಬದುಕನ್ನು ಉಳಿಸುವಂತೆ ಒತ್ತಾಯಿಸಿ ಸ್ಕೀಂ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಸಹಿ ಸಂಗ್ರಹ ಆಂದೋಲನ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಕಟ್ಟಡ ಕಾರ್ಮಿಕರ ಪ್ರಧಾನ ಕಾರ್ಯದರ್ಶಿ ನಾಗಪ್ಪ ರಾಯಚೂರಕರ್,ಶ್ರಮಿಕರ ಬದುಕನ್ನು ಉಳಿಸುವಂತೆ ಒತ್ತಾಯಿಸಿ ಜನವರಿ 23ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂಸದರ ಕಚೇರಿ ಚಲೋ ನಿಮಿತ್ಯ ಸ್ಕೀಂ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಶ್ರಮಿಕರು ನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹಿಸಲಾಗುತ್ತಿದೆ.

Contact Your\'s Advertisement; 9902492681

ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿ ಇರುವ ಯೋಜನೆಗಳಾದ ಐಸಿಡಿಎಸ್, ಎಂಡಿಎಂ, ಎನ್.ಎಚ್.ಎಮ್, ಐಸಿಪಿ, ಎಸ್‍ಸ್‍ಎಸ್‍ಎ, ಮನರೇಗಾ ಮುಂತಾದ ಯೋಜನೆಗಳನ್ನು ಖಾಯ ಮಾಡುವ ಮೂಲಕ ಹಕ್ಕುಗಳನ್ನು ಸಾರ್ವತ್ರಿಕರಣಗೊಳಿಸುವಂತೆ, 3ರಿಂದ ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಹೊರಗುತ್ತಿಗೆ ನೌಕರರಿಗೆ ಖಾಯಂ ಮಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡುವಂತೆ, ಅವರನ್ನು ಖಾಯಂಗೊಳಿಸಲು ವಿಶೇಷ ಕಾನೂನು ರಚಿಸುವಂತೆ, 49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು, ಕಳೆದ 21 ವರ್ಷಗಳಿಂದ ದುಡಿಯುತ್ತಿರುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ 31 ಸಾವಿರ ರೂ.ಗಳ ಕನಿಷ್ಠ ವೇತನ ಜಾರಿ ಮಾಡುವಂತೆ, ನಿವೃತ್ತಿ ಸೌಲಭ್ಯಗಳನ್ನು ಮಾಸಿಕ ಕನಿಷ್ಠ ಹತ್ತು ಸಾವಿರ ರೂ.ಗಳ ಪಿಂಚಣಿ ಕೊಡುವಂತೆ ಅವರು ಆಗ್ರಹಿಸಿದರು.

ನಿವೃತ್ತಿ ಹೊಂದಿದ ಎಲ್ಲ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಗ್ರಾಜ್ಯುಟಿ ಹಣ ಬಿಡುಗಡೆ ಮಾಡುವಂತೆ, ವಿದ್ಯುತ್, ರೈಲ್ವೆ ಸೇರಿದಂತೆ ಯಾವುದೇ ಸಾರ್ವಜನಿಕ ವಲಯಗಳ ಖಾಸಗೀಕರಣ ನಿಲ್ಲಿಸುವಂತೆ ಅವರು ಒತ್ತಾಯಿಸಿದರು.

29 ಕಾರ್ಮಿಕ ಕಾನೂನುಗಳ ಸಂಹಿತೆಗಳನ್ನು ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕರ ಪರವಾದ ನೀತಿಗಳನ್ನು ಜಾರಿಗೆ ತರುವಂತೆ, ರಾಜ್ಯದಲ್ಲಿ ಕೆಲಸದ ಅವಧಿ ಹೆಚ್ಚಳವನ್ನು ತಂದಿರುವ ಕಾರ್ಖಾನೆ ಕಾಯ್ದೆ ತಿದ್ದುಪಡಿ ಕೈಬಿಡುವಂತೆ, ಕೆಲಸದ ಅವಧಿ ಹೆಚ್ಚಿಸುವ, ಮಹಿಳೆಯರಿಗೆ ರಾತ್ರಿ ಪಾಳೆಯದಲ್ಲಿ ದುಡಿಸಿಕೊಳ್ಳುವ ಅವಕಾಶ ನೀಡುವುದೂ ಸೇರಿದಂತೆ ಎಲ್ಲ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯುವಂತೆ ಅವರು ಒತ್ತಾಯಿಸಿದರು.

ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸಾಬಮ್ಮ ಕಾಳಗಿ, ಕಸ್ತೂರಿಬಾಯಿ,ಮಾಳಮ್ಮ,ಮೈತ್ರಾ ತಳವಾರ, ಅಂಬುಜಾ, ಮಾಯಾದೇವಿ, ಸಂಪತ್ತಬಾಯಿ, ಶೋಭಾ,ಗೌರಮ್ಮ, ಮಾನಮ್ಮ, ನಿರ್ಮಲಾಬಾಯಿ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here