ಕಲಬುರಗಿ: ಮಕ್ಕಳನ್ನೆ ಆಸ್ತಿಯಾಗಿ ಮಾಡಬೇಕು.ಇಂದಿನ ಮಕ್ಕಳೆ ದೇಶದ ನಾಳಿನ ಸಂಪತ್ತು.ಕನ್ನಡ ಮಾಧ್ಯಮದಲ್ಲಿ ಅಭ್ಯಾಸ ಮಾಡಿದವರೇ ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ.ಶಿಕ್ಷಣದಲ್ಲಿ ತಾರತಮ್ಯ ಭಾವನೆ ಸಲ್ಲದು ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಅಭಿಪ್ರಾಯಪಟ್ಟರು.
ನಗರದ ರಾಜಾಪೂರದಲ್ಲಿರುವ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಕನ್ನಡ ಭೂಮಿ ಜಾಗೃತಿ ಸಮಿತಿ ಇಂದ ಹಮ್ಮಿಕೊಂಡಿದ್ದ ಕನ್ನಡ ಜಾಗೃತಿ ಅಭಿಯಾನ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು ಇಂದಿನ ವಿದ್ಯಾರ್ಥಿಗಳೆ ನಾಳಿನ ದೇಶದ ಸಂಪತ್ತು . ಹಿಂದೆ ನಾವೆಲ್ಲರೂ ಸರಕಾರಿ ಕನ್ನಡ ಶಾಲೆಗಳಲ್ಲಿ ಓದಿದವರು.ಅಂದು ಶಿಕ್ಷಣ ಪಡೆಯಬೇಕಾದರೆ ಹರಸಾಹಸ ಪಡಬೇಕಾಯಿತು.ಆದರೆ ಬದಲಾದ ಪರಿಸ್ಥಿತಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಬಹಳಷ್ಟು ಸುಧಾರಿಸಿದೆ.ಶಿಕ್ಷಣ ನಡೆಯುತ್ತಿರುವ ಮಕ್ಕಳಿಗೆ ಗುರುಗಳು ಅಭ್ಯಾಸದ ಜೊತೆಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು.
ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುವಂತಹ ವಾತಾವರಣ ನಿರ್ಮಾಣ ಮಾಡಬೇಕು.ಹಳೆ ವಿದ್ಯಾರ್ಥಿಗಳಿಂದ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ ಕೆಲಸ ಎಂದ ಅವರು ಕನ್ನಡ ಉಳಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಹೋರಾಟಗಾರ ಲ್ಕಷ್ಮಣ ದಸ್ತಿ ಮಾತನಾಡಿ ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿ ದೊರಕಿದ್ದು ಹೆಮ್ಮೆಯ ವಿಷಯ.ಶ್ರೀಮಂತ ಇತಿಹಾಸ ಹಿನ್ನಲೆ ಇರುವ ಇಂಥ ಭಾಷೆಯನ್ನೇ ತುಳಿದು ಹಾಕುವ ಹುನ್ನಾರ ನಡೆಯುತ್ತಿದೆ.ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ.ಮಕ್ಕಳಲ್ಲಿ ನಮ್ಮ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ಆಗಬೇಕು.ಇದೇ ಸಂದರ್ಭದಲ್ಲಿ ಮಕ್ಕಳಿಗೆ ಸಾಮಾನ್ಯ ಜ್ಞಾನದ ಪ್ರಶ್ನೆ ಮಾಡುವ ಮೂಲಕ ಇತಿಹಾಸ ತಿಳಿಸಿಕೊಟ್ಟರು.
ಅಧ್ಯಕ್ಷತೆ ವಹಿಸಿದ್ದ ಸಮಿತಿ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಮಾತನಾಡಿ ಇಂದು ಅವಸಾನದ ಅಂಚಿನಲ್ಲಿರುವ ಸರಕಾರಿ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸ ಮಾಡಲು ಸರಕಾರ ಮುಂದಾಗಲಿ.ಸಮಿತಿ ವತಿಯಿಂದ ಸರಕಾರಿ ಶಾಲೆಗಳಲ್ಲಿ ಇನ್ನಷ್ಟು ಕನ್ನಡ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಇನ್ನೋರ್ವ ಮುಖ್ಯ ಅತಿಥಿ ಕಾಂಗ್ರೆಸ್ ಮುಖಂಡ ನೀಲಕಂಠ ಮೂಲೆಗೆ ಮಾತನಾಡಿದರು.ಮಹಾನಗರ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ,ಮಾಜಿ ಮೇಯರ್ ರವಿ ಹೊನ್ನಳ್ಳಿ, ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ಕನ್ನಡ ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಎಂ.ಬಿ.ನಿಂಗಪ್ಪ ಇದ್ದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಾಲಾ ಕಣ್ಣಿ,ಸಿ.ಎಸ್.ಮಾಲಿಪಾಟೀಲ, ಕೇದಾರನಾಥ ಕುಲಕರ್ಣಿ, ಶ್ರೀಮತಿ ಶಾರದಾಬಾಯಿ ಗೌರ , ನಾಗರಾಜ ಹೆಂಬಾಡಿ ಇವರಿಗೆ ಭೂಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಿತಿ ನಗರಾಧ್ಯಕ್ಷ ಪರಮೇಶ್ವರ ಡಡಪದ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲೆಯ ಮುಖ್ಯೋಪಾಧ್ಯಾಯರಾದ ಸೂರ್ಯಕಾಂತ ಮಿಜೇಕಾರ, ಹನುಮಂತಪ್ಪ ಸಾಗರ, ಶಿಕ್ಷಕಿಯರು , ಸೂರ್ಯಕಾಂತ ಕೆ.ಬಿ,ಬಸವರಾಜ ಮಾಗಿ,ಎಂ.ಡಿ.ಮಠಪತಿ,ಸಮಿತಿ ಪದಾಧಿಕಾರಿಗಳಾದ ಅಮಿತ ನಿಲೂರ,ಆನಂದ ತೇಗನೂರ,ಜೈರಾಜ ಕಿಣಿಗೀಕರ,ಬಾಬಾ ಫಕ್ರುದ್ದೀನ್, ಅಶೋಕ ಕಮಲಾಪುರ, ಮಲ್ಲಿಕಾರ್ಜುನ ಸಂಗಶೆಟ್ಟಿ,ಹಳೆ ವಿದ್ಯಾರ್ಥಿಗಳಾದ ಜೈಭೀಮ ವಚ್ಚಾ,ಮಹೇಶ ಹೂಗಾರಗೇರ, ಹರೀಶ್ ಕುಮಾರ್, ಮಲ್ಲಿಕಾರ್ಜುನ ಮಡಿವಾಳ, ಮಲ್ಲಿನಾಥ ಹೆಂಬಾಡೆ,ಶ್ರವಣ ಕುಮಾರ, ಪ್ರೇಮಾನಂದ ಕೋಟೆ,ಮಲ್ಲಿಕಾರ್ಜುನ ಬೊಮ್ಮನಹಳ್ಳಿ, ಅಪ್ಪಾಸಾಬ ಹೂಗಾರಗೇರ ಸೇರಿದಂತೆ ವಿದ್ಯಾರ್ಥಿಗಳು, ಮಕ್ಕಳು ಅಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…