ಹಾವೇರಿ: ಕಳೆದ ನಾಲ್ಕು ದಿನಗಳ ಸುಧೀರ್ಘ ವಿಚಾರಣೆ ಬಳಿಕ, ಡಿ.ಕೆ.ಶಿವಕುಮಾರ ಅವರ ಬಂಧನವಾಗಿರುಯವದಕ್ಕೂ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ನಗರದ ಗುರುಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಲು ಬಂದಾಗ, ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಡಿಕೆಶಿ ಬಂಧನದ ವಿಚಾರ, ಕಾನೂನು ಪ್ರಕಾರ ನಡೆಯುತ್ತಿದೆ. ಇಡಿ ಅಧಿಕಾರಿಗಳು ಕಾನೂನಿನ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆಗೆ ಡಿಕೆಶಿ ಸರಿಯಾಗಿ ಉತ್ತರಿಸಿದ್ದರೆ, ಅವರನ್ನು ಬಂಧಿಸುತ್ತಿರಲಿಲ್ಲಾ. ಅವರಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲು ಡಿಕೆಶಿ ಅವರನ್ನು ಬಂಧಿಸಲಾಗಿದೆ. ಕೋರ್ಟನಲ್ಲಿ ಈ ವಿಚಾರ ಇದೆ ಬಿಜೆಪಿಗೂ ಇದಕ್ಕೂ ಸಂಬಂಧ ಇಲ್ಲಾ ಎಂದು ಸ್ಪಷ್ಟಪಡಿಸಿದರು.
ಇನ್ನು ಡಿ.ಕೆ.ಶಿವಕುಮಾರ ಬಂಧನದ ಬಳಿಕ ರಾಮನಗರ ಜಿಲ್ಲೆ ಹಾಗೂ ಕನಕಪುರದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಮಾಡುತ್ತಿದ್ದಾರೆ. ಅಲ್ಲಿನ ಕಾನೂನು ಕೆಲವು ಪ್ರತಿಭಟನಾಕಾರರು ಕೈಗೆ ತೆಗೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕನಕಪುರ ಮತ್ತು ರಾಮನಗರಗಳಲ್ಲಿ ಶಾಂತಿ ಸಭೆ ಮಾಡಲಾಗುತ್ತಿದೆ. ಜೊತೆಗೆ ಈಗಾಗಲೇ ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ ಭಯಪಡುವ ಅವಶ್ಯಕತೆ ಇಲ್ಲಾ ಎಂದು ತಿಳಿಸಿದರು.
ಪೊಲೀಸ್ ರಿಗೆ ಅನುಕೂಲವಾಗು ಔರಧಕರ್ ವರದಿ ಪರಿಶೀಲನೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಆ ವರದಿ ಅನುಷ್ಠಾನಕ್ಕೆ ತಂದು ಜಾರಿಗೆ ಮಾಡಲಾಗುವುದು. ಅಬಕಾರಿ ಸಚಿವರು ಮನೆ ಮನೆಗೆ ಸಾರಾಯಿ ಸರಬರಾಜು ಮಾಡುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲಾ ಎಂದು ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…