ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಇದೇ ಏಪ್ರಿಲ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ್) ವನ್ನು ಹೊಂದಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗ ತಿಳಿಸಿದ ಕೆಳಕಂಡ 11 ಪರ್ಯಾಯ ದಾಖಲಾತಿಗಳಲ್ಲಿ ಒಂದು ದಾಖಲಾತಿಯನ್ನು ತೋರಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.
ಈ ಚುನಾವಣೆ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 23ರಂದು ಬೆಳಗಿನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಧಿಯನ್ನು ನಿಗದಿಪಡಿಸಿದೆ. ಈ ಬಾರಿ ವೋಟರ್ ಸ್ಲಿಪ್‌ನ್ನು ಗುರುತಿನ ಚೀಟಿಯಂದು ಪರಿಗಣಿಸುತ್ತಿಲ್ಲ. ಕಾರಣ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರು ಮತದಾರರ ಗುರುತಿನ ಚೀಟಿ (ಎಪಿಕ್) ಕಾರ್ಡ ಅಥವಾ ತಮ್ಮ ಭಾವಚಿತ್ರವಿರುವ ಕೆಳಕಂಡ 11 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೊಂದು ದಾಖಲೆ ಒದಗಿಸಿ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಲಿಸಿದೆ. ಈ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
೧) ಪಾಸ್‌ಪೋರ್ಟ್
೨) ಡ್ರೈವಿಂಗ್ ಲೈಸೆನ್ಸ್
೩) ರಾಜ್ಯ/ ಕೇಂದ್ರ ಸರ್ಕಾರ/ ಸಾರ್ವಜನಿಕ ಉದ್ಯಮಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡುವ
ಭಾವಚಿತ್ರವುಳ್ಳ ಸೇವಾ ಗುರುತಿನ ಚೀಟಿ
೪) ಬ್ಯಾಂಕ್, ಕಿಸಾನ್ ಮತು ಅಂಚೆ ಕಚೇರಿಗಳು ನೀಡುವ ಭಾವಚಿತ್ರವುಳ್ಳ ಪಾಸ್ ಬುಕ್
೫) ಪ್ಯಾನ್ ಕಾರ್ಡ್
೬) ಎನ್‌ಪಿಆರ್ ಅಡಿ ಆರ್‌ಜಿಐ ನೀಡಿರುವ ಸ್ಮಾರ್ಟ್ ಕಾರ್ಡ್
೭) ಎನ್‌ಆರ್‌ಇಜಿ ಯೋಜನೆ ಅಡಿ ನೀಡಿರುವ ಭಾವಚಿತ್ರವುಳ್ಳ ಉದ್ಯೋಗ ಖಾತ್ರಿ ಜಾಬ್ ಕಾರ್ಡ್
೮) ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್‌ಗಳು
೯) ಭಾವಚಿತ್ರವುಳ್ಳ ಪಿಂಚಣಿ ಪಾವತಿ ಆದೇಶಗಳು
೧೦) ಆಧಾರ ಕಾರ್ಡ್
೧೧) ಸಂಸದರು, ವಿಧಾನಸಭಾ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…