ಬಿಸಿ ಬಿಸಿ ಸುದ್ದಿ

ಬಸವಣ್ಣನವರನ್ನು “ಕರ್ನಾಟಕದ ‌ಸಾಂಸ್ಕೃತಿಕ ನಾಯಕ ” ಎಂದು ಘೋಷಿಸುವಂತೆ ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ಕಲಬುರಗಿ: 12 ನೆಯ ಶತಮಾನದ ಸಮಾನತೆಯ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ : ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ವಿಶ್ವ ಗುರು ಬಸವಣ್ಣನವರು ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕರಾಗಿದ್ದಾರೆ.

ಕಲ್ಯಾಣದ ಅನುಭವ ಮಂಟಪದ 770 ಶರಣ-ಶರಣೆಯರನ್ನು ಹಾಗೂ ಸಾವಿರಾರು ಜಂಗಮರನ್ನು ಒಗ್ಗೂಡಿಸಿ ಕನ್ನಡದಲ್ಲಿ ವಚನ ಸಂಸ್ಕೃತಿಯನ್ನು ಪಸರಿಸಿ, ಸಮಾನತೆಯ ಸಂದೇಶ ಸಾರಿದ್ದು ಗುರು ಬಸವಣ್ಣನವರು.

12ನೇ ಶತಮಾನದಲ್ಲಿಯೇ ಗುರು ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯದ ಜನರಿಗೂ ಅವಕಾಶ ಕಲ್ಪಿಸಿ ಸಮಾನತೆಯನ್ನು ಪ್ರತಿಪಾದಿಸಿದ್ದರು. ಮುಂದೆ ಸ್ವಾತಂತ್ರದ ನಂತರ ಬಾಬಾ ಸಾಹೇಬ್‌ ಡಾ|| ಬಿ.ಆರ್. ಅಂಬೇಡ್ಕರ್‌ರವರು ಭಾರತ ಸಂವಿಧಾನವನ್ನು ರಚಿಸಿ ದೇಶದಲ್ಲಿ ಸರ್ವರಿಗೂ ಸಮಾನತೆಯನ್ನು ಕಲ್ಪಿಸಿದರು.

“ಕಾಯಕವೇ ಕೈಲಾಸ, ಅರಿವೇ ಗುರು” ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನಮಾನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಅಧಿಕೃತವಾಗಿ ಘೋಷಿಸುವುದರಿಂದ ಇಡೀ ನಾಡಿಗೆ ಸಂತಸವನ್ನು ಉಂಟು ಮಾಡುವುದಲ್ಲದೇ ನಮ್ಮ ರಾಜ್ಯ ಸರ್ಕಾರದ ಗರಿಮೆಯನ್ನು ಹೆಚ್ಚಿಸಿದಂತಾಗುತ್ತದೆ. ಮಹಾರಾಷ್ಟ್ರ ಸರ್ಕಾರವು ಶಿವಾಜಿ ಮಹಾರಾಜರವರನ್ನು ಆ ರಾಜ್ಯದಲ್ಲಿ “ಸಾಂಸ್ಕೃತಿಕ ನಾಯಕ “ಎಂದು ಘೋಷಿಸಿರುವ ಉದಾಹರಣೆ ಈಗಾಗಲೇ ಇದೆ. ಆದ್ದರಿಂದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಘೋಷಿಸಬೇಕೆಂದು ತಮ್ಮಲ್ಲಿ ಕೋರುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago