ವಿ.ಜಿ ಕಾಲೇಜಿಗೆ ಡಾನ್ಸ್ ನಲ್ಲಿ ಸಮಗ್ರ ಪ್ರಶಸ್ತಿ

0
198

ಕಲಬುರಗಿ: ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಮ್ಮಿಕೊಂಡ 18ನೆಯ ಯುವಜನೋತ್ಸವ “ಶಕ್ತಿ ಸಂಭ್ರಮ” ದಲ್ಲಿ ಡಾನ್ಸ್ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಯನ್ನು ನಗರದ ಪ್ರತಿಷ್ಠಿತ ಕಾಲೇಜು ಆದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜು ಪಡೆದುಕೊಂಡಿದೆ.

ಬೀದರ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ದಿನಾಂಕ 2024ರ ಜನವರಿ 16 ರಿಂದ 18ರ ವರೆಗೆ ಹಮ್ಮಿಕೊಂಡ 18ನೇ ಶಕ್ತಿ ಸಂಭ್ರಮ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

Contact Your\'s Advertisement; 9902492681

ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಜಂಟಿ ಕಾರ್ಯದರ್ಶಿಗಳು ಮತ್ತು ಆಡಳಿತ ಮಂಡಳಿಯ ಸರ್ವ ಸದಸ್ಯರು ಹರ್ಷ ವ್ಯಕ್ತ ಪಡಿಸಿದ್ದಾರೆ ಎಂದು ನುಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here