ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳೊಂದಿಗೆ ಕೃಷಿ ಕ್ಷೇತ್ರದಲ್ಲಿನ ಸಾಧನೆ ಅಮೋಘ: ತೇಗಲತಿಪ್ಪಿ

ಕಲಬುರಗಿ: ಜನೆವರಿ ೧೮ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳೊಂದಿಗೆ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿ ೨೦೨೩ನೇ ಸಾಲಿನ ಕೃಷಿಶ್ರೀ ಪ್ರಶಸ್ತಿ ಪುರಸ್ಕೃತರಾದ ನಮ್ಮ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಪ್ರೊ ಯಶವಂತರಾಯ ಅಷ್ಠಗಿ ಅವರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ನುಡಿದರು.

ಕನ್ನಡ ಭವನದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಆದಾಯ ಪಡೆಯಲು ಸಾಧ್ಯವಾಗುತ್ತದೆ ಎಂದರು.

ಕೃಷಿಶ್ರೀ ಪ್ರಶಸ್ತಿ ಪುರಸ್ಕೃತ ಪ್ರೊ ಯಶವಂತರಾಯ ಅಷ್ಠಗಿ ಮಾತನಾಡಿ,ರೈತರು ತಮ್ಮ ಕೃಷಿ ಆದಾಯವನ್ನು ದ್ವಿಗುಣಗೊಳಿಸಲು ಮಿಶ್ರ ಬೇಸಾಯ ಹಾಗೂ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಉತ್ತಮ ಅಧಿಕ ಇಳುವರಿ ಪಡೆದುಕೊಂಡು ನೇರ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಹೆಚ್ಚು ಲಾಭ ಗಳಿಸಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಗೌರವ ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ಪ್ರಮುಖರಾದ ರವೀಂದ್ರಕುಮಾರ್ ಭಂಟನಳ್ಳಿ, ಎಸ್ ಕೆ ಬಿರಾದಾರ್, ಶಕುಂತಲಾ ಪಾಟೀಲ್ ಜವಳಿ, ಶ್ಯಾಮಸುಂದರ, ಜೋಶಿ ,ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ಜಗದೀಶ್ ಮರಪಳ್ಳಿ, ಬಾಬುರಾವ್ ಪಾಟೀಲ್,ಡಾ.ಕೆ ಎಸ್ ಬಂಧು ಸಿದ್ದೇಶ್ವರಕರ್, ಎಚ್ ಎಸ್ ಬರಗಾಲಿ, ಎಂ ಎನ್ ಸುಗಂಧಿ,ಶಿವಶರಣಪ್ಪ ಹಡಪದ ಶಾಂತಲಿಂಗ ಪಾಟೀಲ್ ಕೋಳಕೂರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420