ಕಲಬುರಗಿ: 2023ರ ಡಿಸೆಂಬರ್ 23 ಮತ್ತು 24ರಂದು ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ 24 ಮಹಾಧಿವೇಶನದಲ್ಲಿ ಸಮುದಾಯದ ಒಳಿತಿಗಾಗಿ 08 ನಿರ್ಣಯಗಳನ್ನು ತೆಗೆದುಕೊಳ್ಳಲಾಗಿತ್ತು.
ಅದರಲ್ಲಿ ಮುಖ್ಯವಾಗಿ ಹನ್ನೆರಡನೆ ಶತಮಾನದಲ್ಲೇ ಅನುಭವ ಮಂಟಪದ ಮೂಲಕ ಸಂಸತ್ತಿನ. ಮತ್ತು ಸಮ ಸಮಾಜದ ಪರಿಕಲ್ಪನೆಯನ್ನು ಜಗತ್ತಿಗೆ ಕಟ್ಟಿಕೊಟ್ಟ, ಮಹಾನ್ ಮಾನವತಾವಾದಿ, ಸಾಮಾಜಿಕ ಕ್ರಾಂತಿಯ ಹರಿಕಾರ, ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕರೆಂದು ಕರ್ನಾಟಕ ಸರ್ಕಾರ ಅಧಿಕೃತವಾಗಿ ಘೋಷಿಸಬೇಕೆಂದು ನಿರ್ಣಯಕೈಗೊಳ್ಳಲಾಗಿತ್ತು. ಅದರಂತೆ ತಮಗೆ ಮನವಿಯನ್ನೂ ಸಲ್ಲಿಸಲಾಗಿತ್ತು. ಈ ಬಗ್ಗೆ ನಾಡಿನ ಹರ-ಗುರು-ಚರಮೂರ್ತಿಗಳೂ ಸಹ ತಮ್ಮನ್ನು ಭೇಟಿಮಾಡಿ ಮನವಿಯನ್ನು ಸಲ್ಲಿಸಿರುತ್ತಾರೆ.
ಮಹಾಸಭೆಯ ಮನವಿಯನ್ನು ಪರಿಗಣಿಸಿ ತಾವು ಗುರುವಾರ ನಡೆದ ಸಚಿವ ಸಂಪುಟದಲ್ಲಿ ಸಾಮಾಜಿಕ ಹರಿಕಾರ, ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿರುವುದು ಕೋಟ್ಯಾಂತರ ಬಸವಾಭಿಮಾನಿಗಳಿಗೆ ಹಾಗೂ ವೀರಶೈವ-ಲಿಂಗಾಯತ ಸಮುದಾಯದವರಿಗೆ ಸಂತಸ ತಂದಿದೆ.
ಇಂತಹದೊಂದು ಐತಿಹಾಸಿಕ ನಿರ್ಣಯಕೈಗೊಂಡ ತಮಗೂ ಹಾಗೂ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರುಗಳಿಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಪ್ರಧಾನ ಕಾರ್ಯದರ್ಶಿಯಾದ ಜ್ಯೋತಿ ಎಂ.ಮರಗೋಳ ಅವರು ಹೃತ್ತೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.