ಬೆಂಗಳೂರು; ಯಾದಗಿರಿ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ)ದಲ್ಲಿ ಖಾಲಿ ಇರುವ ಶೀಘ್ರ ಲಿಪಿಕಾರರು- ಗ್ರೇಡ್ – III, ಬೆರಳಚ್ಚುಗಾರರು, ಜವಾನ, ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಶೀಘ್ರ ಲಿಪಿಕಾರರು- ಗ್ರೇಡ್ – III ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಮೂರು ವರ್ಷದ ಡಿಪ್ಲೋಮಾ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರ ಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಮೂರು ವರ್ಷದ ಡಿಪ್ಲೋಮಾ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜವಾನ ಹುದ್ದೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು ವಾಹನ ಚಾಲನಾ ಪರವಾನಿಗೆ ಪತ್ರ ಐಚ್ಛಿಕವಾಗಿರುತ್ತದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. ಶುಲ್ಕ ಪಾವತಿಸಲು ಫೆಬ್ರವರಿ 16 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://yadgir.dcourts.gov.in/notice-category/recruitments/ ನಲ್ಲಿ ನೀಡಲಾದ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.