ಬಿಸಿ ಬಿಸಿ ಸುದ್ದಿ

ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು; ಯಾದಗಿರಿ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ)ದಲ್ಲಿ ಖಾಲಿ ಇರುವ ಶೀಘ್ರ ಲಿಪಿಕಾರರು- ಗ್ರೇಡ್ – III, ಬೆರಳಚ್ಚುಗಾರರು, ಜವಾನ, ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಶೀಘ್ರ ಲಿಪಿಕಾರರು- ಗ್ರೇಡ್ – III ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಮೂರು ವರ್ಷದ ಡಿಪ್ಲೋಮಾ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರ ಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ. ಅಥವಾ ಮೂರು ವರ್ಷದ ಡಿಪ್ಲೋಮಾ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜವಾನ ಹುದ್ದೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು ವಾಹನ ಚಾಲನಾ ಪರವಾನಿಗೆ ಪತ್ರ ಐಚ್ಛಿಕವಾಗಿರುತ್ತದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. ಶುಲ್ಕ ಪಾವತಿಸಲು ಫೆಬ್ರವರಿ 16 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://yadgir.dcourts.gov.in/notice-category/recruitments/  ನಲ್ಲಿ ನೀಡಲಾದ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

8 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

8 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

8 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

8 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

8 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

8 hours ago