ಕಲಬುರಗಿ: ಮೇ ವಜೇಶ್ವರಿ ಸ್ಟೋನ್ ಕ್ರಷರ್ ಕಂಪನಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜೈ ಕನ್ನಡಿಗರ ಸೇನೆ ಕಾರ್ಯಕರ್ತರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಸಾವಳಗಿ (ಬಿ) ಗ್ರಾಮದ ಸರ್ವೆ ನಂಬರ್ 46/2ರಲ್ಲಿರುವ ವಿಸ್ತೀರ್ಣ 1-26 ಎಕರೆ ಜಮೀನು ಪ್ರದೇಶದಲ್ಲಿ ಅಳವಡಿಸಿರುವ ಮೇ? ವಜೇಶ್ವರಿ ಸ್ಪೋನ್ ಕ್ರಷರ್ ಕಂಪನಿ ಅನಧೀಕೃತವಾಗಿ ಗಣಿಗಾರಿಕೆ ಮತ್ತು ಸ್ಟೋನ್ ಕ್ರಷರ್ ನಡೆಸುತ್ತಿರುವ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
6-7 ತಿಂಗಳುಗಳು ಕಳೆದರೂ ಸಹ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಲಬುರಗಿ ಮತ್ತು ಗು.ವಿ.ಸ.ಕಂ.ನಿ. ಯವರು ಯಾವುದೇ ರೀತಿಯ ಕ್ರಮ ಕೈಗೊಂಡಿರುವುದಿಲ್ಲ. ಸದರಿ ಪ್ರಕರಣದಲ್ಲಿ ಗಣಿ ಅಧಿಕಾರಿಗಳು, ಜೆಸ್ಕಾಂ ಅಧಿಕಾರಿಗಳು ಸ್ಟೋನ್ ಕ್ರಷರ್ ಮಾಲೀಕರೊಂದಿಗೆ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿರುತ್ತದೆ.
ಅಲ್ಲದೆ ಸ್ಟೋನ್ ಕ್ರಷರ್ ಕಂಪನಿ ಪ್ರಾರಂಭವಾಗಿ 2 ವರ್ಷಗಳು ಕಳೆದಿದ್ದು, ಗಣಿಗಾರಿಕೆಯ ಸಂಬಂಧ ಸರಕಾರಕ್ಕೆ ಸರಿಯಾದ ರೀತಿಯಲ್ಲಿ ರಾಯಲ್ಟಿ ಕಟ್ಟಿರುವುದಿಲ್ಲ. ಮತ್ತು ನಿರಂತರವಾಗಿ ಅನಧೀಕೃತವಾಗಿ ಗಣಿಗಾರಿಕೆ ಮುಂದುವರೆಸುತ್ತಿದ್ದಾರೆ.
ಈ ಪ್ರಕರಣದ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ತಮ್ಮ ಕಛೇರಿ ಎದುರುಗಡೆ ಜೈ ಕನ್ನಡಿಗರ ಸೇನೆ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ, ಅನೀಲ ತಳವಾರ, ರಾಮಾ ಪೂಜಾರಿ, ಹುಸೇನ್, ಮಲ್ಲು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…