ಗಣರಾಜ್ಯೋತ್ಸವದಲ್ಲಿ ಭಾಗವಹಿಸದ ಅಧಿಕಾರಿಗಳ ಮೇಲೆ ಕ್ರಮ; ಕೆ.ವಿಜಯಕುಮಾರ

0
12

ಸುರಪುರ:ಇದೇ ಜನವೆರಿ 26 ರಂದು ತಾಲೂಕು ಆಡಳಿತ ದಿಂದ ನಗರದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.

ನಗರದ ತಹಸಿಲ್ದಾರ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಜನೆವರಿ 26 ರಂದು ಬೆಳಿಗ್ಗೆ 7:45ಕ್ಕೆ ಎಲ್ಲಾ ಕಚೇರಿಗಳಲ್ಲಿ ಧ್ವಜಾರೋಹಣ ನಡೆಸಿ,ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯವಾಗಿ ಇಡಬೇಕು ಎಂದು ತಿಳಿಸಿದರು.

Contact Your\'s Advertisement; 9902492681

ನಂತರ ತಾಲುಕು ಆಡಳಿತ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಭಾಗವಹಿಸಲಿದ್ದು ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ,ಜೊತೆಗೆ ವಿವಿಧ ರಂಗಗಳಲ್ಲಿನ ಸಾಧಕರಿಗೆ ಸನ್ಮಾನವನ್ನು ನೆರವೇರಿಸಲಾಗುವುದು ಎಂದು ತಿಳಿಸಿದರು.

ಸಭೆಂiÀiಲ್ಲಿ ಗ್ರೇಡ-2 ತಹಸೀಲ್ದಾರ್ ಮಲ್ಲಯ್ಯ ದಂಡು,ತಾ.ಪಂ ಇಓ ಬಸವರಾಜ ಸಜ್ಜನ್,ಟಿಹೆಚ್‍ಓ ಡಾ:ಆರ್.ವಿ.ನಾಯಕ,ಪಿ.ಐ ಆನಂದ ವಾಘಮೊಡೆ, ಜಿ.ಪಂ  ಎಇಇ ಹಣಮಂತ್ರಾಯ ಪಾಟೀಲ್,ಸಮಾಜ ಕಲ್ಯಾಣ ಇಲಾಖೆ ಪ.ಪಂ ಎ.ಡಿ ಮಹ್ಮದ್ ಸಲೀಂ,ಶಾಸಕರ ಆಪ್ತ ಸಹಾಯಕ ಶಿವರಾಜ ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here