ಸುರಪುರ:ಇದೇ ಜನವೆರಿ 26 ರಂದು ತಾಲೂಕು ಆಡಳಿತ ದಿಂದ ನಗರದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಕೆ.ವಿಜಯಕುಮಾರ ತಿಳಿಸಿದರು.
ನಗರದ ತಹಸಿಲ್ದಾರ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಜನೆವರಿ 26 ರಂದು ಬೆಳಿಗ್ಗೆ 7:45ಕ್ಕೆ ಎಲ್ಲಾ ಕಚೇರಿಗಳಲ್ಲಿ ಧ್ವಜಾರೋಹಣ ನಡೆಸಿ,ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯವಾಗಿ ಇಡಬೇಕು ಎಂದು ತಿಳಿಸಿದರು.
ನಂತರ ತಾಲುಕು ಆಡಳಿತ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಭಾಗವಹಿಸಲಿದ್ದು ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ,ಜೊತೆಗೆ ವಿವಿಧ ರಂಗಗಳಲ್ಲಿನ ಸಾಧಕರಿಗೆ ಸನ್ಮಾನವನ್ನು ನೆರವೇರಿಸಲಾಗುವುದು ಎಂದು ತಿಳಿಸಿದರು.
ಸಭೆಂiÀiಲ್ಲಿ ಗ್ರೇಡ-2 ತಹಸೀಲ್ದಾರ್ ಮಲ್ಲಯ್ಯ ದಂಡು,ತಾ.ಪಂ ಇಓ ಬಸವರಾಜ ಸಜ್ಜನ್,ಟಿಹೆಚ್‍ಓ ಡಾ:ಆರ್.ವಿ.ನಾಯಕ,ಪಿ.ಐ ಆನಂದ ವಾಘಮೊಡೆ, ಜಿ.ಪಂ ಎಇಇ ಹಣಮಂತ್ರಾಯ ಪಾಟೀಲ್,ಸಮಾಜ ಕಲ್ಯಾಣ ಇಲಾಖೆ ಪ.ಪಂ ಎ.ಡಿ ಮಹ್ಮದ್ ಸಲೀಂ,ಶಾಸಕರ ಆಪ್ತ ಸಹಾಯಕ ಶಿವರಾಜ ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…