ಕಲಬುರಗಿ: ವಿಶ್ವಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡುವ ಮೂಲಕ ಕರ್ನಾಟಕದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಪಸರಿಸಿದ ಮಹಾಮಾನವತವಾದಿ ಬಸವೇಶ್ವರ ಅವರನ್ನು ‘ಕರ್ನಾಟಕದ ಸಾಂಸ್ಕøತಿಕ ನಾಯಕ’ ಎಂದು ರಾಜ್ಯ ಸರ್ಕಾರ ಗುರುವಾರ ಕ್ಯಾಬಿನೇಟ್ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಇಲ್ಲಿನ ‘ಬಸವೇಶ್ವರ ಸಮಾಜ ಸೇವಾ ಬಳಗ’ ತೀರ್ವ ಹರ್ಷ ವ್ಯಕ್ತಪಡಿಸಿ, ಸರ್ಕಾರಕ್ಕೆ ಅಭಿನಂದನೆ ಮತ್ತು ಅನಂತ ಧನ್ಯವಾದಗಳನ್ನು ಸಲ್ಲಿಸಿತು.
ನಗರದ ಖಾದ್ರಿ ಚೌಕ್‍ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ಬಳಗದ ವತಿಯಿಂದ ಗುರುವಾರ ಸಂಜೆ ಜರುಗಿದ ಸಂಭ್ರಮಾಚಾರಣೆಯ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸಿ, ಸಿಹಿ ವಿತರಣೆ ಮಾಡಲಾಯಿತು.
ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ ಮತ್ತು ಡಿಡಿಪಿಐ ಕಚೇರಿಯ ಇಂಗ್ಲೀಷ್ ವಿಷಯ ಪರಿವೀಕ್ಷಕ ಕರಬಸಯ್ಯ ಮಠ ಮಾತನಾಡಿ, ಈ ಘೋಷಣೆ ಸಮಸ್ತ ಕನ್ನಡಿಗರೆಲ್ಲರಿಗೂ ಅತ್ಯಂತ ಸಂತೋಷದ ವಿಷಯವಾಗಿದೆ. ಶ್ರೇಷ್ಠ ಸಮಾಜ ಸುಧಾರಕ ಬಸವೇಶ್ವರರಿಗೆ ಮತ್ತು ಶರಣ ತತ್ವಕ್ಕೆ ನೀಡಿದ ಗೌರವವಾಗಿದೆ ಎಂದು ಬಸವಣ್ಣನವರ ಅವಿಸ್ಮರಣೀಯ ಕೊಡುಗೆಯನ್ನು ವಿದ್ಯಾರ್ಥಿಗಳಿಗೆ ಮನೋಜ್ಞವಾಗಿ ವಿವರಿಸಿದರು.
ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಪ್ರಮುಖರಾದ ರಾಜಶೇಖರ ಮೆಟೆಕಾರ್, ಬಸಯ್ಯಸ್ವಾಮಿ ಹೊದಲೂರ, ಶಿವಯೋಗೆಪ್ಪಾ ಎಸ್.ಬಿರಾದಾರ, ಶಾಂತಪ್ಪಗೌಡ್ ಮಾಲಿಪಾಟೀಲ್ ಕೋಗನೂರ್, ದೇವೇಂದ್ರಪ್ಪ ಗಣಮುಖಿ, ಸೈಯದ್ ಹಮೀದ್ ಹುಸೇನ್, ಸೋಹೆಲ್ ಶೇಖ್, ಸಮೀರ್ ಮುಜಾವರ್, ವಿನಾಯಕ ಹಿರೇಮಠ, ಆದರ್ಶ ತಿವಾರಿ, ಶಿವಕುಮಾರ ಕಂಠಿಕಾರ, ಸುಲೇಮಾನ್ ಶೇಖ್ ಹಾಗೂ ವಿದ್ಯಾರ್ಥಿಗಳಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…