ಕಲಬುರಗಿ: ರಾಜ್ಯ ಸರ್ಕಾರ ವಿಶ್ಬಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಗೆ ಅವರಿಗೆ ಕಾಳಗಿ ತಾಲ್ಲೂಕಿನ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣ ಆಗಬೇಕು ಎಂದು ಸರ್ಕಾರಕ್ಕೆ ಪತ್ರ ಬರೆದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐಟಿ & ಬಿಟಿ ಹಾಗೂ ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ವಿಶೇಷ ಅಭಿನಂದನೆ ತಿಳಿಸಿದ ಅವರು ರಾಜ್ಯ ಸರಕಾರ ಬಸವಣ್ಣನವರ ವಿಚಾರಗಳು ಎತ್ತಿಹಿಡಿಯುವ ಕೆಲಸವಾಗಲಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.