ಕಲಬುರಗಿ: ಮಹಾರಾಷ್ಟ್ರದ ಸೋಲಾಪುರದಲ್ಕಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಪೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.
ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ಡಾ. ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ವಿಶಾಲ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು ಹೂಗುಚ್ಚ ನೀಡಿ ಪ್ರಧಾನಮಂತ್ರಿಗಳನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಸುಭಾಷ ಗುತ್ತೇದಾರ, ಮಾಲಿಕಯ್ಯ ಗುತ್ತೇದಾರ, ಅಮರನಾಥ ಪಾಟೀಲ, ಬಿ.ಜೆ.ಪಿ. ಪಕ್ಷದ ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಇದ್ದರು.
ನಂತರ ಪ್ರಧಾನಮಂತ್ರಿಗಳು ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…