ಕಲಬುರಗಿ: ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಬಂದರೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಗೈರು ಹಾಜರಾಗಿ ಪ್ರೋಟೋಕಾಲ್ ಉಲ್ಲಂಘಿಸದ್ದಾರೆ ಎಂದು ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅಸಮಧಾನ ವ್ಯಕ್ತಪಡಿಸಿ ರಾಜಿನಾಮೆಗೆ ಆಗ್ರಹಿಸಿದ್ದಾರೆ.
ಪ್ರಧಾನಿ ಮೋದಿಗೆ ಬರಮಾಡಿಕೊಳ್ಳಲು ಕಲಬುರಗಿ ಜಿಲ್ಲಾ ಉಸ್ತುವಾರಿಯಾಗಿರುವ ಪ್ರಿಯಾಂಕ್ ಖರ್ಗೆ ಅವರು ಬರಮಾಡಿಕೊಳ್ಳಬೇಕಿತ್ತು ಆದರೆ ಅವರ ಬದಲಿಗೆ ಸರಕಾರದ ಪ್ರತಿನಿಧಿಯಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಕಳುಹಿಸಿ ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಕೀಡಿಕಾರಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಕಲಬುರಗಿಯಲ್ಲಿ ಸಂಸದ ಜಾಧವ್ ಸ್ವಾಗತಿಸಿದರು, ಈ ಸಂದರ್ಭದಲ್ಲಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮುಡ್, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರರಾದ ವಿಶಾಲ್ ದರ್ಗಿ, ಕೇಂದ್ರ ಸಚಿವ ಭಗವಂತ ಖೋಬಾ, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಸೇರಿದಂತೆ ಹಲವರು ಇದ್ದರು.