ಜ.26ರಂದು ಸಂವಿಧಾನ ಜಾಗೃತಿ ಜಾಥಾಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ: ಬಿ.ಫೌಜಿಯಾ ತರನ್ನುಮ್

0
47

ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣ ಹಿನ್ನೆಲೆ

ಕಲಬುರಗಿ: ದೇಶದ ಪರಮೋಚ್ಛ ಗ್ರಂಥ ಭಾರತೀಯ ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ “ಸಂವಿಧಾನ ಜಾಗೃತಿ ಜಾಥ” ರಾಷ್ಟ್ರೀಯ ಸಮಾವೇಶ ಆಯೋಜಿಸಲಾಗುತ್ತಿದ್ದು, ಇದರ ಅಂಗವಾಗಿ ಜಿಲ್ಲಾ ಹಂತದಲ್ಲಿ ನಡೆಯುವ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಇದೇ ಜನವರಿ 26 ರಂದು ನಗರದ ಪೋಲಿಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ “ಸಂವಿಧಾನ ಜಾಗೃತಿ ಜಾಥ” ರಾಷ್ಟ್ರೀಯ ಸಮಾವೇಶ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿದ ಅವರು ಭಾರತದ ಸಂವಿಧಾನ ಮತ್ತು ಏಕತೆ ಕಾರ್ಯಕ್ರಮವನ್ನು ಸರ್ವರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಲಾಗುತ್ತಿದೆ ಎಂದರು.

Contact Your\'s Advertisement; 9902492681

ಜನವರಿ 26 ರಿಂದ ಫೆಬ್ರವರಿ 23ರ ವರೆಗೆ ಎರಡು ಸ್ತಬ್ಧಚಿತ್ರಗಳ ಮೆರವಣಿಗೆಯು ಜಿಲ್ಲೆಯ 261 ಗ್ರಾಮ ಪಂಚಾಯತಿ ಮತ್ತು ನಗರ ಪಟ್ಟಣ ಪ್ರದೇಶದಲ್ಲಿ ಸಂಚರಿಸಿ ಬೆಂಗಳೂರಿನತ್ತ ಮುಖ ಮಾಡಲಿವೆ. ಜಾಥಾ ಮೆರವಣಿಗೆಯುದ್ದಕ್ಕೂ ಸಂವಿಧಾನ ಪೀಠಿಕೆ ಮತ್ತು ಅದರಲ್ಲಿನ ಅಂಶಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮ ಪಂಚಾಯತಿ ಮತ್ತು ನಗರ ಪಟ್ಟಣ ಪ್ರದೇಶದಲ್ಲಿ ಸಂಚರಿಸುವ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮೆರವಣಿಗೆ ಸುಲಲಿತವಾಗಿ ನಡೆಯುವಂತೆ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು, ಶಾಲಾ-ಕಾಲೇಜು ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಬೇಕು. ಅಲ್ಲದೆ ಸ್ಥಳೀಯ ಕಲಾವಿದರಿಂದ ಕಲಾ ಪ್ರದರ್ಶನ ಕಾರ್ಯಕ್ರಮ ಸಹ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದರು.

ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಗಳು ಭಾರತದ ಸಂವಿಧಾನ ಪೀಠಿಕೆ ವಾಚನ, ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕುರಿತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ, ಬಸವಣ್ಣನವರ ವಚನಗಳು ಮತ್ತು ಭಾರತ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಐತಿಹಾಸಿಕ ಸ್ಥಳ, ಕಲೆ, ಸಂಸ್ಕøತಿ ಬಿಂಬಿಸುವುದರ ಜೊತೆಗೆ ಸಾಹಿತ್ಯ ದಿಗ್ಗಜರ ಪರಿಚಯಿಸುವ ಕೆಲಸವಾಗಬೇಕು. ಜಾಗೃತಿ ಜಾಥಾ ಮೆರವಣಿಗೆಯ ಸ್ತಬ್ದಚಿತ್ರ ನಿರ್ಮಾಣ, ಮೆರವಣಿಗೆ ಮಾರ್ಗ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆಗೆ ಅಧಿಕಾರಿಗಳ ತಂಡ ರಚಿಸಿದ್ದು, ನೀಡಲಾದ ಜವಾಬ್ದಾರಿಯನ್ನು ಅಧಿಕಾರಿಗಳು ಸಮಪರ್ಕವಾಗಿ ನಿರ್ವಹಿಸಬೇಕು ಎಂದರು.

*ಶಾಲಾ-ಕಾಲೇಜಿನಲ್ಲಿ ಪ್ರಬಂಧ,ಕ್ವಿಜ್ ಸ್ಪರ್ಧೇ:*

ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜಿನಲ್ಲಿ ಭಾರತೀಯ ಸಂವಿಧಾನ ಕುರಿತು ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಆಯೋಜಿಸಬೇಕು. ಇದರಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ನೀಡಲು ಸಹ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಸಣ್ಣ ಸ್ಟೇಜ್‍ಗಳನ್ನು ಸ್ಥಾಪಿಸಿ ತಜ್ಞರಿಂದ ಭಾಷಣ ಮಾಡಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.

ಎಸ್.ಪಿ. ಅಡ್ಡೂರು ಶ್ರೀನಿವಾಸಲು ಮಾತನಾಡಿ, ಸ್ತಬ್ದಚಿತ್ರ ಮೆರವಣಿಗೆಯ ಸಂದರ್ಭದಲ್ಲಿ ರಾತ್ರಿ ಹೊತ್ತಿನಲ್ಲಿ ಜಿಲ್ಲೆಯ ಯಾವುದೇ ಸ್ಥಳದಲ್ಲಿ ತಂಗಿದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಲ್ಲಿ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತದೆ ಎಂದರು.

ವಿವಿಧ ಸಮುದಾಯಗಳ ಸಂಘ-ಸಂಸ್ಥೆಗಳು ಪ್ರತಿನಿಧಿಗಳು, ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೆ ಸಲಹೆ ನೀಡಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ್ ಭುವನೇಶ ದೇವಿದಾಸ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here