ಮತದಾನದಂದೂ ಎಲ್ಲ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸೂಚನೆ

0
77

ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ 2019ರ ಏಪ್ರಿಲ್ ೨೩ರಂದು ಮತದಾನ ನಡೆಯಲಿದೆ. ಮತದಾನ ದಿನದಂದು ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ರ ಪ್ರಕಾರ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಸಹಿತ ರಜೆ ನೀಡಿ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕೆಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಮಿಕರಿಗೆ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೇ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದೇ ಇದ್ದಲ್ಲಿ ಅಂತಹ ಸಂಸ್ಥೆಗಳ ಮಾಲೀಕರ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾಪ್ರತಿನಿಧ್ಯ ಕಾಯ್ದೆಯ ಕಲಂ 135(ಬಿ) ಉಲ್ಲಂಘನೆಗಾಗಿ ಕಾನೂನಿನ ಪ್ರಕಾರ ಕ್ರಮ ಜರುಗಿಸಲಾಗುವುದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here