ಮಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿರುವ ಎಸ್.ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ಹಠಾತ್ ರಾಜೀನಾಮೆ ಸಲ್ಲಿಸಿದ್ದಾರೆ.
ವೈಯಕ್ತಿಕ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸ್ಪಷ್ಟಪಡಿಸಿರುವ ಸಸಿಕಾಂತ್ ಸೆಂಥಿಲ್, ತನ್ನ ರಾಜೀನಾಮೆಗೆ ಯಾವುದೇ ವ್ಯಕ್ತಿ ಅಥವಾ ಸದ್ಯ ತಾನು ಸೇವೆ ಸಲ್ಲಿಸುತ್ತಿರುವ ದ.ಕ. ಜಿಲ್ಲಾಧಿಕಾರಿ ಅವಧಿಯಲ್ಲಿನ ಯಾವುದೇ ಘಟನೆ ಕಾರಣವಲ್ಲ ಎಂದು ತಿಳಿಸಿದ್ದಾರೆ.
“ನಮ್ಮ ವೈವಿಧ್ಯ ಪ್ರಜಾಪ್ರಭುತ್ವದ ಮೂಲಭೂತ ರಚನೆಗಳ ಜೊತೆ ಹಿಂದೆಂದೂ ಕಂಡಿರದ ರೀತಿಯಲ್ಲಿ ರಾಜಿ ಮಾಡಿಕೊಳ್ಳುವಾಗ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ನನಗೆ ಅನೈತಿಕವೆಂದು ಎನಿಸಿದ ಕಾರಣ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ದೇಶದ ಮೂಲ ಚೌಕಟ್ಟುಗಳು ಅತ್ಯಂತ ಕಷ್ಟಕರ ಸವಾಲುಗಳನ್ನು ಎದುರಿಸಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಆದ್ದರಿಂದ ನಾನು ಐಎಎಸ್ ನಿಂದ ಹೊರಬಂದು ನನ್ನ ಕೆಲಸ ಮುಂದುವರಿಸಿ ಎಲ್ಲರಿಗೂ ಒಳ್ಳೆಯದನ್ನು ಮಾಡಬೇಕೆಂದು ನಿರ್ಧರಿಸಿದ್ದೇನೆ” ಎಂದವರು ತಿಳಿಸಿದ್ದಾರೆ.
”ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿರುವುದು ಹೌದು. ರಾಜೀನಾಮೆ ಪ್ರತಿ ನನ್ನ ಕೈಗೂ ಸೇರಿದೆ” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ದೃಢೀಕರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…