ಬಿಸಿ ಬಿಸಿ ಸುದ್ದಿ

ಸರ್ಕಾರ ಶರಣ ಸಂಕುಲಕ್ಕೆ ಬಹುದೊಡ್ಡ ಗೌರವ ಸಲ್ಲಿಸಿದೆ; ಹಳ್ಳಿ

ಶಹಾಬಾದ: ಮಹಾಮಾನವತಾವಾದಿ, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸೋ ಮೂಲಕ ಕರ್ನಾಟಕ ಸರ್ಕಾರ ಶರಣ ಸಂಕುಲಕ್ಕೆ ಬಹುದೊಡ್ಡ ಗೌರವ ಸಲ್ಲಿಸಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ತಿಳಿಸಿದ್ದಾರೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸೋ ಮೂಲಕ ಸರ್ಕಾರದ ಈ ನಿರ್ಧಾರದಿಂದಾಗಿ ಜಗತ್ತಿನೆಲ್ಲೆಡೆ ಇರೊ ಸಮಸ್ತ ಬಸವಾನುಯಾಯಿಗಳಲ್ಲಿ ಹರ್ಷ ಮನೆಮಾಡಿದೆ.ಸಮಸಮಾಜದ ನಿರ್ಮಾಣ ಮಾಡಿದ ಬಸವಣ್ಣನವರ ಅನುಯಾಯಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಸಿದ್ದರಾಮಯ್ಯ ಅವರು ತಮ್ಮ ಕ್ಯಾಬಿನೆಟ್ ಅನುಮತಿ ಪಡೆದು ಅಧಿಕೃತವಾಗಿ ಘೋಷಣೆ ಮಾಡಿರೋದಕ್ಕೆ ಅವರಿಗೆ ಅನಂತ ಅಭಿನಂದನೆ.

ಜಾತೀಯತೆ, ಅಸ್ಪೃಶ್ಯತೆ ವಿರುದ್ಧ ತೊಡೆತಟ್ಟಿ ನಿಂತು ದೀನ ದಲಿತರ, ಕಾಯಕ ವರ್ಗಗಳ ಆಶಾಕಿರಣವಾಗಿದ್ದ ಬಸವಣ್ಣನವರು ದೇಹವೆ ದೇಗುಲವೆಂದು ಸಾರಿದರು. ವರ್ಗ, ಜಾತಿ, ಲಿಂಗ ಭೇದವನ್ನು ತೊಡೆದುಹಾಕಲು ಇಷ್ಟಲಿಂಗವನ್ನು ನೀಡಿದರು. ದೇವರು, ಭಕ್ತನ ನಡುವೆ ಪೂಜಾರಿ ಎಂಬ ಮಧ್ಯವರ್ತಿಯ ಅವಶ್ಯಕತೆಯಿಲ್ಲ ಎಂದು ನಿರೂಪಿಸಿದವರು. ಬಸವ ತತ್ವ ಪ್ರಸಾರವಾದಷ್ಟು ಜನರಲ್ಲಿ ಮೂಢನಂಬಿಕೆ, ಕಂದಾಚಾರಗಳ ಬಗ್ಗೆ ಅರಿವು ಮೂಡುತ್ತದೆ.

ಶರಣರ ವಿಚಾರಗಳು ಮನೆಮನೆ ತಲುಪಬೇಕು. ಕಲ್ಯಾಣದ ಅರಿವು ವಿಸ್ತಾರವಾಗುತ್ತಾ ಹೋಗುವಲ್ಲಿ ಸರ್ಕಾರದ ಈ ನಿರ್ಧಾರ ಸಹಕಾರಿಯಾಗಲಿದೆ, ಆ ಉದ್ದೇಶ ಇಟ್ಟುಕೊಂಡೆ ಸರ್ಕಾರ ಈ ಘೋಷಣೆ ಮಾಡಿದೆ ಎನ್ನುವುದು ಬಸವಾನುಯಾಯಿಗಳ ಬಲವಾದ ನಂಬಿಕೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago