ಬಿಸಿ ಬಿಸಿ ಸುದ್ದಿ

ಬಸವ ಅಭಿಮಾನಿಗಳಿಂದ ಸಂಭ್ರಮಾಚರಣೆ

ಶಹಾಬಾದ:12ನೇ ಶತಮಾನದಲ್ಲಿ ಮೂಢನಂಬಿಕೆ, ಡಾಂಬಿಕತನ ಮತ್ತು ಕಂದಾಚಾರಗಳ ವಿರುದ್ಧ ಕಟುವಾಗಿ ಎಚ್ಚರಿಸಿದ ಶರಣನೆಂದರೆ ನಿಜಶರಣ ಅಂಬಿಗರ ಚೌಡಯ್ಯ ಎಂದು ಕಸಾಪ ಕಲಬುರಗಿ ಗ್ರಾಮೀಣ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಹೇಳಿದರು.

ಅವರು ರವಿವಾರ ಹಳೆಶಹಾಬಾದನ ಬಸವೇಶ್ವರ ವೃತ್ತದಲ್ಲಿ ಶರಣ ಬಳಗದ ವತಿಯಿಂದ ಕರ್ನಾಟಕ ಸರಕಾರವು ಶರಣ ಚಳವಳಿಯ ಹರಿಕಾರ ಬಸವಣ್ಣನವರನ್ನು ಕನ್ನಡ ನಾಡಿನ ಸಾಂಸ್ಕøತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆ ಸಂಭ್ರಮಾಚರಣೆ ಹಾಗೂ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಜಶರಣ ಅಂಬಿಗರ ಚೌಡಯ್ಯನವರ ಮೌಲ್ಯಗಳು ಸಾರ್ವಕಾಲಿಕ. ಅವುಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿನ ಅಂಧಶ್ರದ್ಧೆ, ಶಿಕ್ಷಣದ ಕೊರತೆ, ಮೂಢನಂಬಿಕೆಗಳನ್ನು ನೀಗಿಸಬಹುದು. 12 ನೇ ಶತಮಾನದಲ್ಲಿ ಸಮಾಜದಲ್ಲಿ ಡಾಂಬಿಕತನ, ಕಂದಾಚಾರ, ಮೂಢನಂಬಿಕೆಗಳನ್ನು ಹೋಗಲಾಡಿಸಿ ವಚನ ಸಾಹಿತ್ಯಗಳ ಮೂಲಕ ಅಂಬಿಗರ ಚೌಡಯ್ಯನವರು ಸಮಾಜ ಸುಧಾರಣೆಗೆ ಶ್ರಮಿಸಿದರು.
ಶಿಕ್ಷಕ ಗಿರಿಮಲ್ಲಪ್ಪ ವಳಸಂಗ ಮಾತನಾಡಿ, ರಾಜ್ಯ ಸರ್ಕಾರದಿಂದ ಬಸವಣ್ಣನವರನ್ನು ಕರ್ನಾಟಕ ಸಾಂಸ್ಕøತಿಕ ನಾಯಕ ಎಂದು ಘೋಷಣೆ ಮಾಡಿದ್ದು ಸಂತಸ ತಂದಿದೆ.

ಬಸವಾಭಿಮಾನಿಗಳ ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯನವರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೆವೆ ಎಂದು ತಿಳಿಸಿದರು.ಅಲ್ಲದೇ ಸಹಕರಿಸಿದ ಸಚಿವ ಸಂಪುಟದ ಮಂತ್ರಿಗಳಿಗೆ, ಎಲ್ಲಾ ಶಾಸಕರಿಗೂ ಧನ್ಯವಾದಗಳನ್ನು ಸಲ್ಲಿಸಿದರು. ಜಗತ್ತಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ, ಕಾಯಕ, ದಾಸೋಹದಂತಹ ಶ್ರೇಷ್ಠ ತತ್ವ ನೀಡಿ ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕನಾಗಿದ್ದಾನೆ. ಕರ್ನಾಟಕ ಅμÉ್ಟೀ ಅಲ್ಲ, ನೆರೆಯ ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳು ಸಹ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಸರಕಾರ ಸಾಂಸ್ಕøತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆ ಪಟಾಕಿ ಸಿಡಿಸ ಸಿಹಿ ಹಂಚಿ ಸಂಭ್ರಮಿಸಿದರು.

ವೀರಶೈವ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಚಂದನಕೇರಿ,ಮಲ್ಲಿಕಾರ್ಜುನ ವಾಲಿ,ಶರಣಪ್ಪ ಕೊಡದೂರ್,ಅಣವೀರ ದ್ಯಾಮಾ,ಚನ್ನು ಸಿನ್ನೂರ್,ಅಣ್ಣಾರಾಯ ಹುಗ್ಗಿ,ಚನ್ನವೀರಪ್ಪ ಪಾಟೀಲ,ಬಸವರಾಜ ಶಾಪೂರ,ಬಸವರಾಜ ವಳಸಂಗ,ಸುಭಾಷ ಪಾರಾ,ಶಾಂತಪ್ಪ ಹಡಪದ,ಸಿದ್ದು ಸಂಗಾವಿ,ಮಲ್ಲು ಬೇನೂರ,ಅರುಣ ಜಾಯಿ, ಕುಪೇಂದ್ರ ತುಪ್ಪದ,ನಾಗೇಂದ್ರ ನಾಟೀಕಾರ, ಶಿವಕುಮಾರ ನಾಟೀಕಾರ,ಸಂಜು ಪಾರಾ, ನಾಗೇಶ ತುಪ್ಪದ್,ಬಾಬುರಾವ ಹಳ್ಳಿ.,ಹಣಮಂತ ನಂದೂರ,ಹಣಮಂತ ದಂಡಗುಲಕರ್,ಶಟ್ಟಪ್ಪ ಮಿರಜಕರ್, ಶರಣಪ್ಪ ಡೆಂಗಿ,ಅರವಿಂದ ಪತ್ತಾರ,ಶರಣು ಕೌಲಗಿ,ಸಾಗರ ಶಾಪೂರ,ರೇವಣಸಿದ್ದ ಮತ್ತಿಮಡು,ಕಿರಣ ಇಂಗಳಗಿ,ಮಹೇಶ ಜಾಯಿ, ರಾಮಚಂದ್ರ ವಿಶ್ವಕರ್ಮ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

4 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

13 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

13 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

14 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago