ಕಲಬುರಗಿ: ಕರ್ನಾಟಕ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ, ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಮತ್ತು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬೀದರನ ಸಹಯೋಗದಲ್ಲಿ 2024ರ ಜನವರಿ 16 ರಿಂದ 18ರ ವರೆಗೆ ಜರುಗಿದ 18ನೇ ಶಕ್ತಿ ಸಂಭ್ರಮ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಇಂದು ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಈ ಕೆಳಗಿನಂತೆ ಇವೆ:
- ಫೋಕ್ ಡಾನ್ಸ್ – ದ್ವಿತೀಯ ಸ್ಥಾನ
- ಒನ್ ಆಕ್ಟ್ ಪ್ಲೇ – ತೃತೀಯ ಸ್ಥಾನ
- ಸ್ಕಿಟ್ – ತೃತೀಯ ಸ್ಥಾನ
- ವೆಸ್ಟರ್ನ್ ಸೋಲೋ – ದ್ವಿತೀಯ ಸ್ಥಾನ – ಶೃತಿ ಕುಲಕರ್ಣಿ
- ಮಿಮಿಕ್ರಿ – ದ್ವಿತೀಯ ಸ್ಥಾನ – ಭವ್ಯಾ
- ಕ್ಲಾಸಿಕಲ್ ಸೋಲೋ – ದ್ವಿತೀಯ ಸ್ಥಾನ – ಪ್ರಿಯಾಂಕಾ
ಡಾನ್ಸ್ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಬೀದರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಜರುಗಿದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಮಂಗಳಾ ಬಿರಾದಾರ ಅವರ ನೇತೃತ್ವದಲ್ಲಿ ಸುಮಾರು 40 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಸಾಧನೆಗೆ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತ ಪಡಿಸಿದ್ದಾರೆ.