ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ಜ.28 ರಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಸಂವಿಧಾನ, ಸಾಮಾಜಿಕ ನ್ಯಾಯ, ಸಹಭಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಮಹಾಂತೇಶ ಕವಲಗಿ ಹೇಳಿದರು.
ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶೋಷಿತರ ಜಾಗೃತಿ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರಲಿದ್ದಾರೆ. ಹೀಗಾಗಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಎಮ್ಮೇನೂರ್, ರಾಮಲಿಂಗ ಬಾನಾರ್, ಮಹೇಬೂಬ ಶಾ, ಬಸವರಾಜ ಚಿನ್ನಮಳ್ಳಿ, ನಿಂಗಣ್ಣ ಹೇಗಲೇರಿ, ದೇವಿಂದ್ರ ಅಣಕಲ್, ಬಸವರಾಜ ಪೂಜಾರಿ, ಸಂತೋಷ ಪೂಜಾರಿ, ಯಲ್ಲಾಲಿಂಗ, ಗುರು, ಪ್ರಭು, ಭೀಮಣ್ಣ ಹೋತಿನಮಡಿ, ಮಹ್ಮದ್ ಇಬ್ರಾಹಿಂ, ರವಿ ಸೇರಿದಂತೆ ವಿವಿಧ ಸಮಾಜದ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.