ಸಂವಿಧಾನ ಶಿಲ್ಪಿಗೆ ಅಪಮಾನ: ಕೆ ನೀಲಾ ಖಂಡನೆ| ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

0
74

ಕಲಬುರಗಿ: ಸೋಮವಾರ ರಾತ್ರಿ ಇಲ್ಲಿನ ದಕ್ಷಿಣ ಮತಕ್ಷೇತ್ರದ ಕೋಟನೂರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಕೃತ್ಯವನ್ನು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಖಂಡಿಸಿದ್ದಾರೆ.

ಭಾರತದ ಸಮಗ್ರ ಅಭಿವೃದ್ಧಿಗೆ , ಸರ್ವಜನತೆಯ ಸಮಾನತೆಗೆ ಸಂವಿಧಾನ ಕೊಟ್ಟ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡುವ ಮೂಲಕ ಭಾರತ ಸಂವಿಧಾನವನ್ನು, ಸಮಾನತೆಯನ್ನು ವಿರೋಧಿಸುವ ಮನೋಭಾವ ಇದರಲ್ಲಿ ಸ್ಪಷ್ಟವಾಗಿದೆ. ಭಾರತವನ್ನು ಕೋಮುವಾದಿ ನೆಲೆಯಲ್ಲಿ ವಿಚ್ಛಿದ್ರಗೈಯುತ್ತಿರುವ ಸಂವಿಧಾನವಿರೋಧಿ ಮನುವಾದಿ ಮನಸುಗಳು ಇಂತಹ ದುಷ್ಕೃತ್ಯಕ್ಕಿಳಿಯುತ್ತವೆ. ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದ್ದು, ದುಷ್ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಇಂತಹ ಕೃತ್ಯಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here