ಕಲಬುರಗಿ: ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ದೇಶಕ್ಕೆ ನೀಡಿ ಭಾರತೀಯರ ಬಾಳಿಗೆ ಬೆಳಕಾಗಿರುವ ಸಂವಿಧಾನ ಶಿಲ್ಪಿ- ಭಾರತ ರತ್ನ ಬಾಬಾಸಾಹೇಬ ಡಾ ಬಿ ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಅವಮಾನ ಮಾಡಿರುವ ತಪ್ಪಿತಸ್ಥರನ್ನು ಈ ಕೂಡಲೇ ಬಂಧಿಸಿ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರೂ ಆಗಿರುವ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಡಾ.ಅಂಬಾರಾಯ ಅಷ್ಠಗಿ ಯವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಹಾಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್ ಅವರು ಎಲ್ಲಾ ಸಮುದಾಯವರಿಗೂ ಸದಾ ಪೂಜ್ಯನೀಯರಾಗಿದ್ದಾರೆ. ಇಂತಹ ಮತಿಹೀನ ಕೆಲಸಗಳಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಕಿಡಿಗೇಡಿಗಳು ಮಾಡಿದ್ದಾರೆ. ಈ ಘಟನೆಯನ್ನು ಸರ್ಕಾರ ತನಿಖೆ ನಡೆಸಿ,ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಪ್ರಕಾರ ಶಿಕ್ಷೆಗೊಳಪಡಿಸಬೇಕು. ಡಾ ಬಿ ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಮಾಡುವ ಅಪಮಾನ ಇಡೀ ನಾಗರಿಕ ಸಮಾಜಕ್ಕೆ ಮಾಡುವ ಅಪಮಾನವಾಗಿದ್ದೂ,ಇಂತಹ ಅನಾಗರಿಕ ಪ್ರವೃತ್ತಿಯನ್ನು ನಾವು ಎಲ್ಲರೂ ಸೇರಿಕೊಂಡು ಖಂಡಿಸಲೇಬೇಕು.
ಈ ಘಟನೆಯನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…