ಬಿಸಿ ಬಿಸಿ ಸುದ್ದಿ

ರಾಜ್ಯದಲ್ಲೀಗ ಒಟ್ಟು 5,37,85,815 ಮತದಾರರು

ಬೆಂಗಳೂರು; ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ-2024 ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,37,85,815 ಆಗಿದ್ದು, ಇದರಲ್ಲಿ 2,69,33,750 ಪುರುಷ ಮತದಾರರು, 2,68,47,145 ಮಹಿಳಾ ಮತದಾರರು ಮತ್ತು 4,920 ಇತರೆ ಮತದಾರರು ಇದ್ದಾರೆ. ಇದರಲ್ಲಿ ಮಹಿಳಾ ಮತದಾರರಿಗೂ ಹಾಗೂ ಪುರುಷ ಮತದಾರರಿಗೂ ಸ್ವಲ್ಪ ಮಾತ್ರ ವ್ಯತ್ಯಾಸವಿರುವುದು ಸಂತಸದ ವಿಷಯವಾಗಿದೆ. ಮಹಿಳೆಯರು ಸಹ ದೊಡ್ಡ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಪ್ರಕಟಿಸಲಾದ ರಾಜ್ಯದ ಅಂತಿಮ ಮತದಾರರ ಪಟ್ಟಿ – 2024 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಪ್ರಕಾರ 5.33 ಕೋಟಿ ಮತದಾರರಿದ್ದರು. ಇದೀಗ 4.08 ಲಕ್ಷ ಮತದಾರರು ಹೆಚ್ಚಳವಾಗಿದ್ದಾರೆ.

ಮಹಿಳಾ ಮತದಾರರದಲ್ಲಿ ಗಮನಾರ್ಹವಾಗಿ ಹೆಚ್ಚಳವಾಗಿದ್ದು, 2.77 ಲಕ್ಷ ಮತದಾರರು ಅಧಿಕವಾಗಿದ್ದಾರೆ. ಪುರುಷ ಮತದಾರರಲ್ಲಿ 1.30 ಮತ್ತು ಇತರೆ ಮತದಾರರಲ್ಲಿ 24 ಮತದಾರರ ಸಂಖ್ಯೆ ಹೆಚ್ಚಳವಾಗಿದೆ. 100 ವರ್ಷ ಮೇಲ್ಪಟ್ಟ ವಯಸ್ಸಿನ ಮತದಾರರ ಸಂಖ್ಯೆ 17,937 ಆಗಿದೆ. ಆದರೆ ಕರಡು ಮತದಾರರ ಪಟ್ಟಿಯಲ್ಲಿ 100 ವರ್ಷ ಮೇಲ್ಪಟ್ಟ ವಯಸ್ಸಿನ ಮತದಾರರ ಸಂಖ್ಯೆಯು 23,377 ಇತ್ತು. 80 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕರಡುಪಟ್ಟಿಯಲ್ಲಿ 13.82 ಲಕ್ಷ ಮತದಾರರಿದ್ದರೆ, ಅಂತಿಮ ಮದಾರರ ಪಟ್ಟಿಯಲ್ಲಿ 12.71 ಲಕ್ಷ ಮತದಾರರಿದ್ದಾರೆ.

18-19 ವರ್ಷ ವಯಸ್ಸಿನ ಯುವ ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಕರಡುಪಟ್ಟಿಯಲ್ಲಿ 6.45 ಲಕ್ಷ ಮತದಾರರಿದ್ದರೆ, ಅಂತಿಮಪಟ್ಟಿಯಲ್ಲಿ 10.34 ಮತದಾರರಿದ್ದಾರೆ. ಒಟ್ಟು 3.88 ಲಕ್ಷ ಮತದಾರರ ಅಧಿಕವಾಗಿದ್ದಾರೆ. ಸೇವಾ ಮತದಾರರು ಒಟ್ಟು 46,501 ರಷ್ಟು ಇದ್ದಾರೆ. 3,164 ಸಾಗರೋತ್ತರ ಮತದಾರರಿದ್ದಾರೆ. ವಿಕಲಚೇತನ ಮತದಾರರು 5.62 ಲಕ್ಷ ಮಂದಿ ಇದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರವು ಅತಿ ಹೆಚ್ಚು 7,17,201 ಮತದಾರರಿದ್ದು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಒಟ್ಟು 1,67,556 ಮತದಾರರಿದ್ದಾರೆ.

ಮತದಾರರ ಗುರುತಿನ ಚೀಟಿಗಳನ್ನು ಮತದಾರರಿಗೆ ತ್ವರಿತ ಅಂಚೆ ಸೇವೆಯ ಮೂಲಕ ಆಯಾ ವಿಳಾಸಗಳಿಗೆ ರವಾನಿಸಲಾಗುತ್ತಿದೆ. ನವೆಂಬರ್ 2023ರ ಅಂತ್ಯದ ವೇಳೆಗೆ 17.47 ಮತದಾರರ ಗುರುತಿನ ಚೀಟಿಗಳನ್ನು ಯಶಸ್ವಿಯಾಗಿ ತ್ವರಿತ ಅಂಚೆ ಮೂಲಕ ನೇರವಾಗಿ ಮತದಾರರಿಗೆ ತಲುಪಿಸಲಾಗಿದೆ. ಪ್ರಸ್ತುತ 10.76 ಲಕ್ಷ ಮತದಾರರ ಗುರುತಿನ ಚೀಟಿಗಳನ್ನು ಮುದ್ರಿಸಿದ್ದು, ಪ್ರಸ್ತುತ ಮತದಾರರಿಗೆ ರವಾನಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ಅಂತಿಮ ಮತದಾರರ ಪಟ್ಟಿ ಪ್ರಕಾರ ಒಟ್ಟು ಮತಗಟ್ಟೆಗಳ ಸಂಖ್ಯೆ 58,834 ಆಗಿದೆ. ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಸಮಯದಲ್ಲಿ 845 ಮತಗಟ್ಟೆಗಳನ್ನು ಸೇರ್ಪಡೆಗೊಳಿಸಿದ್ದು, 552 ಮತಗಟ್ಟೆಗಳು ಹೆಚ್ಚಳವಾಗಿವೆ. ಕಳೆದ 2023 ರ ಸಾಲಿನ ವಿಧಾನಸಭೆ ಚುನಾವಣೆ ವೇಳೆ 58,545 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಅವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಕ್ಷಣವೇ ನೋಂದಾಯಿಸಲು ಪೆÇ್ರೀತ್ಸಾಹಿಸಲಾಗುತ್ತದೆ. ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಎಂಬುದು ಗಮನದಲ್ಲಿಟ್ಟುಕೊಳ್ಳುವುದು.

ಆದ್ದರಿಂದ, ಮತದಾರರು ತುರ್ತಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಲು ಮತ್ತು ದೃಢೀಕರಿಸಲು ಮನವಿ ಮಾಡಲಾಗಿದೆ. ಅರ್ಹ ಮತದಾರರು ಅರ್ಜಿಗಳನ್ನು ಸಲ್ಲಿಸಲು ತಮ್ಮ ಮೊಬೈಲ್‍ನಲ್ಲಿ ವೋಟರ್ ಹೆಲ್ಪಲೈನ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಾವೇ ಅರ್ಜಿ ಸಲ್ಲಿಸಬಹುದು ಅಥವಾ https://voterportal.eci.gov.in/ ಪೆÇೀರ್ಟಲ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago