ಬೆಂಗಳೂರು; ಸುಭಾಷ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನೇತಾಜಿ ಸುಭಾಷ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.
ಸುಭಾμï ಚಂದ್ರ ಬೋಸ್ ಅವರ 127 ನೇ ಜಯಂತಿಯನ್ನು ಆಚರಿಸುತ್ತಿದ್ದು, ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ಮರಿಸಿ, ಗೌರವಿಸಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಗಾಂಧೀಜಿ ಹಾಗೂ ಸುಭಾಷ ಚಂದ್ರ ಬೋಸ್ ನಡುವೆ ಸ್ವಾತಂತ್ರ್ಯ ಹೋರಾಟದ ಹಾದಿಯ ಬಗ್ಗೆ ಭಿನ್ನಾಭಿಪ್ರಾಯ ಮೂಡಿತ್ತು. ಮಹಾತ್ಮ ಗಾಂಧೀಜಿ ಶಾಂತಿ, ಅಹಿಂಸೆ ಮೂಲಕ ಸ್ವಾತಂತ್ರ್ಯ ಗಳಿಸಬೇಕು ಎಂದರೆ, ಸುಭಾಷ ಚಂದ್ರ ಬೋಸ್ ಅವರಿಗೆ ಅದರ ತದ್ವಿರುದ್ಧವಾದ ನಿಲುವು ಇತ್ತು. ಬೇರೆ ವಿಚಾರಗಳಲ್ಲಿ ಗಾಂಧೀಜಿ ಯವರ ಬಗ್ಗೆ ಅಪಾರವಾದ ಗೌರವವಿತ್ತು.
ಈ ವಿಚಾರದಲ್ಲಿ ಮಾತ್ರ ಆಲೋಚನೆಗಳಲ್ಲಿ ಭಿನ್ನಾಭಿಪ್ರಾಯ ಇತ್ತು. ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಥಾಪಿಸಿ ಅದರ ಮುಖ್ಯಸ್ಥರಾಗಿದ್ದರು. ಜಪಾನ್ ದೇಶದಲ್ಲಿ ಅವರು ವಿಮಾನ ದುರಂತದಲ್ಲಿ ಅವರು ಸಾವಿಗೀಡಾದರು. ಅಪ್ರತಿಮ ಸ್ವಾತಂತ್ರ್ಯ ಪ್ರೇಮಿ, ದೇಶಪ್ರೇಮಿಯಾಗಿದ್ದರು. ಸುಭಾμï ಚಂದ್ರ ಬೋಸ್ ಅವರು ನಮಗೆಲ್ಲಾ ಆದರ್ಶ. ಅವರ ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವುದೇ ಅವರಿಗೆ ಸಲ್ಲಿಸುವ ಗೌರವ. ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…