ಕಲಬುರಗಿ: ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ದುರ್ಷರ್ಮಿಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಯಾರೂ ಉದ್ವೇಗ ಕ್ಕೆ ಒಳಗಾಗದಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಘಟನೆ ಕುರಿತು ಟ್ವಿಟ್ ಮಾಡಿ, ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ ಸಭೆಗಾಗಿ ಆಗಮಿಸಿದ್ದ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೂಡಲೇ ಕಲಬುರಗಿಗೆ ವಾಪಸ್ ಕಳುಹಿಸಿ ಈ ಪ್ರಕರಣದ ಕುರಿತು ತೀವ್ರಗತಿಯಲ್ಲಿ ತನಿಖೆ ನಡೆಸಿ ಆದಷ್ಟು ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಸಮಾನತೆಗಾಗಿ ತಮ್ಮ ಜೀವನವನ್ನೇ ಸವೆಸಿ ಇಡೀ ದೇಶದ ಶೋಷಿತ ಸಮುದಾಯಗಳಿಗೆ ಬದುಕುವ ಹಕ್ಕನ್ನು ಕೊಟ್ಟ ಮಹಾತ್ಮನಿಗೂ ಅಪಮಾನ ಮಾಡಿದವರಿಗೆ ತಕ್ಕ ಶಿಕ್ಷೆ ನೀಡುವ ಕೆಲಸವನ್ನು ಖಂಡಿತ ಮಾಡಲಿದ್ದೇವೆ. ಈ ಸಂದರ್ಭದಲ್ಲಿ ಯಾರೂ ಕೂಡ ಉದ್ವೇಗಕ್ಕೆ ಒಳಗಾಗದೇ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಕಳಕಳಿಯಿಂದ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…